ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಕೆಗೆ ಡಿಸೆಂಬರ್ 31 ಕಡೇ ದಿನ
ಮೈಸೂರು

ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಕೆಗೆ ಡಿಸೆಂಬರ್ 31 ಕಡೇ ದಿನ

October 25, 2020

ನವದೆಹಲಿ,ಅ.24- 2019-20ನೇ ಸಾಲಿಗೆ ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಡಿ.31ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ. ಖಾತೆಗಳನ್ನು ಲೆಕ್ಕಪರಿಶೋಧಿಸಬೇಕಾದ ತೆರಿಗೆದಾರರಿಗೆ, ಆದಾಯ -ತೆರಿಗೆ ರಿಟರ್ನ್ ಫೈಲಿಂಗ್ ಗಡುವನ್ನು 2021 ಜನವರಿ 31ರವರೆಗೆ 2 ತಿಂಗಳು ವಿಸ್ತರಣೆ ಮಾಡಲಾಗಿದೆ. 2019-20ನೇ ಸಾಲಿನ ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಕೆ ಕಡೇ ದಿನವನ್ನು ಜು.31ರಿಂದ ನ.30ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಮೇ ತಿಂಗಳಲ್ಲಿ ಪ್ರಕಟಿಸಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಉನ್ನತ ನೀತಿ ನಿರೂಪಣಾ ಸಂಸ್ಥೆಯಾದ ಕೇಂದ್ರೀಯ ನೇರ ತೆರಿಗೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಸಲು ತೆರಿಗೆದಾರರಿಗೆ ಹೆಚ್ಚಿನ ಸಮಯವನ್ನು ನೀಡುವ ಸಲುವಾಗಿ ಗಡುವನ್ನು ವಿಸ್ತರಿಸಲಾಗಿದೆ ಎಂದು ಸಿಬಿಡಿಟಿ ಹೇಳಿದೆ.

 

Translate »