ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮೈಸೂರು

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

January 7, 2019

ಹುಬ್ಬಳ್ಳಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಎಲ್ಲಾ ಸಾರಿಗೆ ಸಂಸ್ಥೆಗಳೂ ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಹೀಗಾಗಿ ಪ್ರಯಾಣ ದರ ಹೆಚ್ಚಿಸಬೇಕೆಂಬ ಬೇಡಿಕೆ ಇದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದೆ ತೈಲ ಬೆಲೆ ಏರಿಕೆಯಾದಾಗ ಅವು ಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿಮೆ ಮಾಡಲಾಗಿತ್ತು. ಈಗ ತೈಲ ಬೆಲೆ ಕಡಿಮೆಯಾಗಿ ರುವುದರಿಂದ ಏರಿಸಲಾಗಿದೆ. ಇಷ್ಟಾದರೂ ರಾಜ್ಯ ದಲ್ಲಿನ ತೆರಿಗೆ ಪ್ರಮಾಣ ದೇಶದಲ್ಲಿಯೇ ಕಡಿಮೆ ಇದೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು. ಸಾಲ ಮನ್ನಾಕ್ಕಾಗಿ ಯಾವುದೇ ಇಲಾಖೆ ಹಣವನ್ನು ಬಳಸಿಕೊಂಡಿಲ್ಲ. ಅದಕ್ಕಾಗಿಯೇ 9 ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ ಎಂದರು.

ಈಗಾಗಲೇ ಸಾರಿಗೆ ಇಲಾಖೆ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಬಸ್‍ಗಳ ಪ್ರಯಾಣ ದರವನ್ನು ಶೇ.14ರಿಂದ 18ರವರೆಗೆ ಹೆಚ್ಚಿಸುವ ಪ್ರಸ್ತಾವ ವನ್ನು ಸರ್ಕಾರಕ್ಕೆ ಸಲ್ಲಿಸಿದೆ.

ಪ್ರಯಾಣದರ ಹೆಚ್ಚಳಕ್ಕೆ ಸಮ್ಮತಿ ನೀಡುವಂತೆ ಹಣಕಾಸು ಇಲಾಖೆ ಸಿಎಂ ಕುಮಾರಸ್ವಾಮಿಗೆ ಸಲಹೆ ನೀಡಿದೆ ಎನ್ನಲಾಗಿದೆ. ಈ ಹಿಂದೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆಗಳು 3 ತಿಂಗಳ ಹಿಂದೆಯೇ ಶೇ.18 ರಷ್ಟು ಪ್ರಯಾಣ ದರ ಹೆಚ್ಚಿಸುವಂತೆ ಪ್ರಸ್ತಾವ ಸಲ್ಲಿಸಿದ್ದವು. ನಂತರ ದರ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಎಂ ಕುಮಾರಸ್ವಾಮಿ ಕೂಡ ಸಾರಿಗೆ ಇಲಾಖೆ ಪ್ರಸ್ತಾಪ ತಿರಸ್ಕರಿಸಿದ್ದರು. ಇದೀಗ ಕಳೆದ 10 ವಾರಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಳಿಕೆಯಾಗುತ್ತಿದ್ದು ಸರ್ಕಾರದ ಆದಾಯಕ್ಕೆ ಹೊಡೆತ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೆರಿಗೆ ಏರಿಕೆ ಮಾಡಿದ್ದು, ಮತ್ತೆ ಪ್ರಯಾಣ ದರ ಹೆಚ್ಚಳದ ಬಿಸಿ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದೆ.

Translate »