ಅಡುಗೆ ಅನಿಲ ದರ ಹೆಚ್ಚಳ: ಕಾಂಗ್ರೆಸ್ ಮುಖಂಡ ಖಂಡನೆ
ಮೈಸೂರು

ಅಡುಗೆ ಅನಿಲ ದರ ಹೆಚ್ಚಳ: ಕಾಂಗ್ರೆಸ್ ಮುಖಂಡ ಖಂಡನೆ

August 22, 2021

ಮೈಸೂರು, ಆ.21- ಅಡುಗೆ ಅನಿಲ ದರವನ್ನು 25 ರೂ. ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ವಿರೋಧಿ ಎಂಬು ದನ್ನು ಮತ್ತೆ ಸಾಬೀತುಪಡಿಸಿದೆ ಎಂದು ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್‍ಕುಮಾರ್ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದಿನ ಬಳಕೆ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿದೆ. ತೈಲಬೆಲೆ ಹೆಚ್ಚಳದಿಂದ ಈಗಾಗಲೇ ಕಂಗಾಲಾಗಿದ್ದ ಜನ ಸಿಲಿಂಡರ್ ಬೆಲೆ ಹೆಚ್ಚಳದಿಂದ ನಿತ್ಯ ಪರದಾಡುವಂತಾಗಿದೆ ಎಂದಿದ್ದಾರೆ. ಬಿಜೆಪಿಗೆ ಬಡವರು, ಮಧ್ಯಮ ವರ್ಗದವರ ಬಗ್ಗೆ ಕಾಳಜಿ ಇಲ್ಲ. ಬಂಡವಾಳಶಾಹಿಗಳ ಹಿತದೃಷ್ಟಿ ಗಮನದಲ್ಲಿಟ್ಟು ಕೇಂದ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಬೆಲೆ ಏರಿಕೆ ನಿಯಂತ್ರಣ ವಿಚಾರದಲ್ಲಿ ವೈಫಲ್ಯ ಸಾಧಿಸಿರುವುದು ಇದಕ್ಕೆ ಸಾಕ್ಷಿ ಎಂದು ಆರೋಪಿಸಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ರೂಪಾಯಿ ಏರಿಕೆಯಾದರೂ ಬಿಜೆಪಿ ಯವರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರು. ಇಷ್ಟೊಂದು ಪ್ರಮಾಣದ ಬೆಲೆ ಏರಿಕೆ ಬಿಸಿ ತಟ್ಟಿದ್ದರೂ ಅವರೆಲ್ಲ ಈಗ ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ‘ಭ್ರಷ್ಟಾಚಾರದ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಸರ್ಕಾರ ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಟ್ಟಿದೆ ಎಂದು ದೂರಿದರು.

Translate »