ಕಡಕೊಳ ಕೈಗಾರಿಕಾ ಪ್ರದೇಶದಲ್ಲಿ ಪೊಲೀಸರ ಗಸ್ತು ಹೆಚ್ಚಳ ಸಂದೇಶರ ಪ್ರಸ್ತಾಪಕ್ಕೆ ಗೃಹ ಸಚಿವರ ಭರವಸೆ
ಮೈಸೂರು

ಕಡಕೊಳ ಕೈಗಾರಿಕಾ ಪ್ರದೇಶದಲ್ಲಿ ಪೊಲೀಸರ ಗಸ್ತು ಹೆಚ್ಚಳ ಸಂದೇಶರ ಪ್ರಸ್ತಾಪಕ್ಕೆ ಗೃಹ ಸಚಿವರ ಭರವಸೆ

March 5, 2021

ಬೆಂಗಳೂರು, ಮಾ.4- ಕಡಕೊಳ ಕೈಗಾರಿಕಾ ಪ್ರದೇಶದಲ್ಲಿ ಕುಡುಕರ ಹಾವಳಿ ಮತ್ತು ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಮೈಸೂರು ದಕ್ಷಿಣ ಪೊಲೀಸ್ ಠಾಣೆ ಮತ್ತು ಕಡಕೊಳ ಹೊರ ಪೊಲೀಸ್ ಠಾಣೆಯ ಅಧಿಕಾರಿ ಗಳು, ಸಿಬ್ಬಂದಿಯಿಂದ ಕಡಕೊಳ ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ, ಗಸ್ತು ಕರ್ತವ್ಯ ಏರ್ಪಡಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗು ತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಧಾನ ಪರಿಷತ್‍ನಲ್ಲಿಂದು ತಿಳಿಸಿದರು. ಕಡಕೊಳ ಕೈಗಾರಿಕಾ ಪ್ರದೇಶದಲ್ಲಿ ಕುಡುಕರ ಹಾವಳಿ, ಅಕ್ರಮ ಚಟುವಟಿಕೆ ನಡೆಸುವ ವ್ಯಕ್ತಿಗಳಿಂದ, ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಭಯಗ್ರಸ್ಥ ವಾತಾವರಣ ಉಂಟಾಗಿದೆ. ಕೂಡಲೇ ಗಸ್ತು ಹೆಚ್ಚಿಸಿ ಕ್ರಮ ತೆಗೆದುಕೊಳ್ಳಬೇಕು. ಕಡಕೊಳ ಕೈಗಾರಿಕಾ ಪ್ರದೇಶದಲ್ಲಿ ಒಂದು ಹೊರಪೊಲೀಸ್ ಠಾಣೆ ಸ್ಥಾಪಿಸಬೇಕೆಂಬ ಸಂದೇಶ್ ನಾಗರಾಜ್ ಅವರ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

 

Translate »