ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ ಸಂಪುಟ ಅಸ್ತು
ಮೈಸೂರು

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ ಸಂಪುಟ ಅಸ್ತು

October 9, 2022

ನ್ಯಾ. ನಾಗಮೋಹನದಾಸ್ ನೇತೃತ್ವದ ಸಮಿತಿ ಶಿಫಾರಸ್ಸಿನಂತೆ ಎಸ್‌ಸಿ ಶೇ.೧೫ರಿಂದ ೧೭, ಎಸ್‌ಟಿ ಶೇ.೩ರಿಂದ ೭ಕ್ಕೆ ಏರಿಸಲು ನಿರ್ಧಾರ

ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಿ, ಪರಿಷ್ಕೃತ ಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನ

ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸ್ಸಿನಂತೆ ಒಳ ಮೀಸಲಾತಿ ಅನುಷ್ಠಾನ

ಸಂಬAಧ ಅಧ್ಯಯನಕ್ಕೆ ಸಂಪುಟ ಉಪಸಮಿತಿ ರಚನೆ
ಬೆಂಗಳೂರು, ಅ.೮(ಕೆಎಂಶಿ)-ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿಯ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿ ಮೀಸಲಾತಿ ಯನ್ನು ಶೇ.೧೫ರಿಂದ ೧೭ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.೩ರಿಂದ ಶೇ.೭ಕ್ಕೆ ಹೆಚ್ಚಿಸಿ ಶೀಘ್ರವೇ ಸರ್ಕಾರದ ಆದೇಶ ಹೊರಡಿಸಿ, ಅನುಷ್ಠಾನಗೊಳಿಸಲು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಒಳ ಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಸದಾ ಶಿವ ಆಯೋಗದ ವರದಿಯ ಅಧ್ಯಯನಕ್ಕೂ ಕಾನೂನು ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿದೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಜೆ.ಸಿ.ಮಾಧು ಸ್ವಾಮಿ, ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸ್ಸಿ ನಂತೆ ಒಳಮೀಸಲಾತಿ ಅನುಷ್ಠಾನಗೊಳಿಸುವ ಸಂಬAಧ ವರದಿಯ ಅಧ್ಯಯನ ನಡೆಸಿ
ಸರ್ಕಾರಕ್ಕೆ ವರದಿ ಸಲ್ಲಿಸಲು ಸಂಪುಟ ಉಪಸಮಿತಿ ರಚಿಸಲಾಗಿದೆ ಎಂದರು. ನಿನ್ನೆ ನಡೆದ ಸರ್ವಪಕ್ಷಗಳ ನಾಯಕರ ಸಭೆಯಲ್ಲೂ ನ್ಯಾ. ನಾಗಮೋಹನದಾಸ್ ನೇತೃತ್ವದ ಸಮಿತಿಯ ವರದಿ ಶಿಫಾರಸ್ಸನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿತ್ತು.

ಅದರಂತೆ ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ತಕ್ಷಣವೇ ಮೀಸಲಾತಿ ಹೆಚ್ಚಳದ ಬಗ್ಗೆ ಸರ್ಕಾರದ ಆದೇಶ ಹೊರಡಿಸಿ ಅನುಷ್ಠಾನಗೊಳಿಸುವ ಬಗ್ಗೆ ತೀರ್ಮಾನಿಸಲಾಯಿತು ಎಂದು ಹೇಳಿದರು. ಒಂದೆರಡು ದಿನದಲ್ಲಿ ಸರ್ಕಾರದ ಆದೇಶ ಹೊರಬೀಳಲಿದ್ದು, ಆದೇಶದಲ್ಲಿ ಯಾವ ರೀತಿ ಮೀಸಲಾತಿ ಪ್ರಮಾಣ ಹೆಚ್ಚಳವಾಗಲಿದೆ, ಹೇಗೆ ಮೀಸಲಾತಿ ಅನುಷ್ಠಾನಗೊಳಿಸಬೇಕು ಎಂಬ ಸ್ಪಷ್ಟನೆ ಸಿಗಲಿದೆ. ಎಸ್ಸಿ-ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಅಲ್ಲದೆ, ಇದಕ್ಕೆ ನ್ಯಾಯಮೂರ್ತಿ ಸುಭಾಷ್ ಆಡಿ ನೇತೃತ್ವದ ಸಮಿತಿ ವರದಿ, ನ್ಯಾಯಮೂರ್ತಿ ನಾಗಮೋಹನ ದಾಸ್ ನೇತೃತ್ವದ ಸಮಿತಿ ವರದಿ, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಗಳಿವೆ. ಆದರೆ ಇತರೆ ಹಿಂದುಳಿದ ವರ್ಗಗಳ ಬೇಡಿಕೆಗೆ ಸಂಬAಧಿಸಿದAತೆ ಯಾವುದೇ ಅಧ್ಯಯನದ ವರದಿಗಳು, ಆಯೋಗದ ವರದಿಗಳು ಸರ್ಕಾರದ ಮುಂದೆ ಸದ್ಯಕ್ಕಿಲ್ಲ ಎಂದರು. ಸದ್ಯಕ್ಕೆ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಶಿಕ್ಷಣ, ನೇಮಕಾತಿಗೆ ಸಂಬAಧಿ ಸಿದಂತೆ ಅನುಕೂಲವಾಗಲಿದೆ. ಎಸ್ಸಿಯಲ್ಲಿ ೧೦೩ ಜಾತಿಗಳು, ಎಸ್ಟಿಯಲ್ಲಿ ೫೬ರಿಂದ ೫೭ ಜಾತಿಗಳಿವೆ. ಈ ಸಮುದಾಯಗಳನ್ನು ಕಡೆಗಣಿಸುವಂತದ್ದಲ್ಲ ಎಂದು ಹೇಳಿದರು.
ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿಯಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯಂತೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಉಲ್ಲೇಖವಿದೆ. ಹೀಗಾಗಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮತ್ತೊಮ್ಮೆ ಅವಲೋಕನ ಮಾಡಿ ಒಳಮೀಸಲಾತಿ ಹೇಗೆ ಜಾರಿಗೊಳಿಸಬೇಕು ಎಂಬ ಬಗ್ಗೆ ವರದಿ ಪಡೆಯಲಾಗುವುದು. ಈಗಾಗಲೇ ಮೀಸಲಾತಿ ಹೆಚ್ಚಳಕ್ಕೆ ಸಂಬAಧಿಸಿದAತೆ ಸಾಕಷ್ಟು ಹೋರಾಟಗಳು ನಡೆದಿವೆ. ಒಬಿಸಿಗೆ ಸೇರಿಸಬೇಕು, ಎಸ್ಟಿಗೆ ಸೇರಿಸಬೇಕು ಎಂಬ ಮನವಿಗಳಿವೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಒಟ್ಟು ಮೀಸಲಾತಿ ಬಗ್ಗೆ ಸರ್ಕಾರ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಿದೆ.
ಈಗಾಗಲೇ ತಮಿಳುನಾಡಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಶೇ.೬೯ರಷ್ಟು ಮೀಸಲಾಗತಿ ನೀಡಲಾಗುತ್ತಿದೆ. ನ್ಯಾಯಾಲಯದಲ್ಲಿ ತಡೆಯಾಜ್ಞೆ ತರಬಾರದು ಎಂಬ ಕಾರಣಕ್ಕೆ ಮೀಸಲಾತಿ ಹೆಚ್ಚಳವನ್ನು ಷೆಡ್ಯೂಲ್ ೯ರಡಿ ತರಬೇಕಿದೆ. ಕೆಲವು ರಾಜ್ಯಗಳು ಮೀಸಲಾತಿ ಹೆಚ್ಚಳವನ್ನು ಅನುಷ್ಠಾನ ಮಾಡಿವೆ. ಕೆಲವು ರಾಜ್ಯಗಳು ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿವೆ. ಸಂವಿಧಾನದ ಪ್ರಕಾರ ಶೇ.೫೦ರಷ್ಟು ಮಿತಿ ದಾಟಬಾರದು ಎಂಬ ಬಗ್ಗೆ ಸುಪ್ರೀಂಕೋರ್ಟ್ ತೀರ್ಪಿದೆ.

ಒಬಿಸಿ ವಿಚಾರದ ಬಗ್ಗೆಯೂ ಚರ್ಚೆ ಮಾಡಬೇಕಿದೆ. ಹೀಗಾಗಿ ನಾವು ಮಾತು ಕೊಟ್ಟಂತೆ ಎಸ್ಸಿ-ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಿ ಅನುಷ್ಠಾನ ಮಾಡುತ್ತಿದ್ದೇವೆ. ಬೇರೆ ಸಮುದಾಯದ ಬೇಡಿಕೆ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಆದರೆ ಆ ಬೇಡಿಕೆಗಳ ಕುರಿತಂತೆ ವೈಜ್ಞಾನಿಕ ಅಧ್ಯಯನದ ವರದಿ ಸದ್ಯಕ್ಕಿಲ್ಲ. ವರದಿ ಇಲ್ಲದೆ ಅನುಷ್ಠಾನ ಮಾಡಲಾಗುವುದಿಲ್ಲ ಎಂದರು. ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದರಿಂದ ಯಾವ ರೀತಿ ಮೀಸಲಾತಿ ಹೊಂದಾಣಿಕೆ ಮಾಡಬೇಕು ಎಂಬ ಬಗ್ಗೆ ಆದೇಶದಲ್ಲಿ ಸ್ಪಷ್ಟಪಡಿಸಲಾಗುವುದು ಎಂದು ಹೇಳಿದರು.

Translate »