ಸ್ಪರ್ಧೆಗೆ ಶ್ರೀನಿವಾಸ್ ಪ್ರಸಾದ್ ಮೇಲೆ ಹೆಚ್ಚಿದ ಒತ್ತಡ
ಚಾಮರಾಜನಗರ

ಸ್ಪರ್ಧೆಗೆ ಶ್ರೀನಿವಾಸ್ ಪ್ರಸಾದ್ ಮೇಲೆ ಹೆಚ್ಚಿದ ಒತ್ತಡ

March 14, 2019

ಚಾಮರಾಜನಗರ: ಚಾ.ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಕಾಂಗ್ರೆಸ್‍ನ ಆರ್. ಧ್ರುವನಾರಾಯಣ ಅವರನ್ನು ಮಣಿಸಲು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರೇ ಸ್ಪರ್ಧಿಸ ಬೇಕು ಎಂದು ಕ್ಷೇತ್ರದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಸತತ ಎರಡು ಬಾರಿ ಗೆಲುವು ಸಾಧಿಸಿ, ಬೀಗುತ್ತಿರುವ ಧ್ರುವನಾರಾಯಣ ಅವ ರಿಗೆ ಜೆಡಿಎಸ್ ಜೊತೆಗಿನ ಮೈತ್ರಿಯು ಮತ್ತಷ್ಟು ಬಲ ತುಂಬಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ 5 ಬಾರಿ ಗೆಲುವು ಸಾಧಿಸಿ ಜನಪ್ರಿಯತೆ ಹೊಂದಿರುವ ವಿ.ಶ್ರೀನಿ ವಾಸಪ್ರಸಾದ್ ಅವರೇ ಸ್ಪರ್ಧಿಸಬೇಕು ಎಂಬುದು ಬಿಜೆಪಿ ಮುಖಂಡರು ಹಾಗೂ ಪ್ರಸಾದ್ ಬೆಂಬಲಿಗರ ಒತ್ತಾಯವಾಗಿದೆ.

ಈಗಾಗಲೇ ಪ್ರತಿನಿತ್ಯ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡುತ್ತಿರುವ ಅವರ ಬೆಂಬಲಿಗರು ಚಾಮರಾಜನಗರ ಲೋಕ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ದುಂಬಾಲು ಬಿದ್ದಿದ್ದಾರೆ. ಆದರೆ, ಆರೋಗ್ಯ ದೃಷ್ಟಿಯಿಂದ ತಾವು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಶ್ರೀನಿವಾಸಪ್ರಸಾದ್ ಖಡಾ ಖಂಡಿತವಾಗಿ ಹೇಳುತ್ತಿದ್ದು, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಕಾರ್ಯ ಕರ್ತರು ಹಾಗೂ ಬೆಂಬಲಿಗರಿಗೆ ಕಿವಿ ಮಾತು ಹೇಳುತ್ತಿದ್ದಾರೆ.

ಶ್ರೀನಿವಾಸಪ್ರಸಾದ್ ಅವರು ತಮ್ಮ ನಿಲು ವನ್ನು ಬದಲಿಸದೇ ಇದ್ದ ಪಕ್ಷದಲ್ಲಿ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು 16 ಆಕಾಂಕ್ಷಿಗಳು ತುದಿಗಾಲ ಮೇಲೆ ನಿಂತಿದ್ದು, ಶ್ರೀನಿವಾಸ ಪ್ರಸಾದ್ ಸೇರಿದಂತೆ ಪಕ್ಷದ ಹಿರಿಯ ಮುಖಂ ಡರ ಕೃಪಾಕಟಾಕ್ಷಕ್ಕಾಗಿ ಕಾಯುತ್ತಿದ್ದಾರೆ.
ಮಾಜಿ ಶಾಸಕ ಡಾ.ಭಾರತೀಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ, ಮೈಸೂರಿನ ಹೆಸರಾಂತ ವಕೀಲ ಎಸ್. ಅರುಣ್‍ಕುಮಾರ್, ನಿವೃತ್ತ ಐಎಫ್‍ಎಸ್ ಅಧಿಕಾರಿ ಡಾ. ರಾಜು, ಕೊಳ್ಳೇಗಾಲ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಮಾಜಿ ಸಚಿವರೂ ಆದ ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಕೋಟೆ ಶಿವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ. ರಮೇಶ್, ಶ್ರೀನಿವಾಸ ಪ್ರಸಾದ್ ಅವರ ಅಳಿಯ ಡಾ. ಮೋಹನ್, ಚಾಮರಾಜನಗರ ಜಿಪಂ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದ ವೆಂಕಟರಮಣಸ್ವಾಮಿ (ಪಾಪು) ಮತ್ತು ಕೋಟೆ ಲಕ್ಷ್ಮಣ್ ಸೇರಿ ದಂತೆ 16 ಆಕಾಂಕ್ಷಿಗಳು ಟಿಕೆಟ್‍ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಶ್ರೀನಿವಾಸಪ್ರಸಾದ್ ಅವರ ಅಭಿಪ್ರಾಯವೇ ಅಂತಿಮ ಎಂಬ ಕಾರಣ ಕ್ಕಾಗಿ ಬಹುತೇಕ ಎಲ್ಲಾ ಆಕಾಂಕ್ಷಿಗಳಿದ್ದಾರೆ.

Translate »