ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ
ಮೈಸೂರು

ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ

August 6, 2020

ಮೈಸೂರು, ಆ.5-ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿ ರುವ ಪರಿಣಾಮ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯ ಗಳಲ್ಲಿ ಒಳ ಹರಿವು ಹೆಚ್ಚಾಗಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‍ಎಸ್ ಜಲಾಶಯಕ್ಕೆ ಬುಧವಾರ 29,855 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಇದರಿಂದಾಗಿ 124.80 ಅಡಿ ಗರಿಷ್ಠ ಸಾಮಥ್ರ್ಯದ ಈ ಜಲಾಶಯದ ಇಂದಿನ ನೀರಿನ ಮಟ್ಟ 108.40 ಅಡಿಗೆ ಏರಿಕೆಯಾಗಿದೆ. ಜಲಾಶಯದಿಂದ 4,715 ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ.

ಕಬಿನಿ ಜಲಾಶಯಕ್ಕೆ 33,977 ಕ್ಯೂಸೆಕ್ಸ್ ನೀರು ಹರಿದು ಬರು ತ್ತಿದ್ದು, 2284 ಅಡಿ ಗರಿಷ್ಠ ಸಾಮಥ್ರ್ಯದ ಈ ಜಲಾಶಯದ ಇಂದಿನ ನೀರಿನ ಮಟ್ಟ 2279.72 ಅಡಿಗೆ ಏರಿಕೆಯಾ ಗಿದ್ದು, 50,600 ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿದೆ. ಹಾರಂಗಿ ಜಲಾಶಯಕ್ಕೆ 7500 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, 2859 ಅಡಿ ಸಾಮಥ್ರ್ಯದ ಈ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2857 ಅಡಿಗೆ ಏರಿಕೆಯಾಗಿದೆ. 13 ಸಾವಿರ ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ. ಹೇಮಾವತಿ ಜಲಾಶಯಕ್ಕೆ 24,185 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, 2922 ಅಡಿ ಗರಿಷ್ಠ ಸಾಮಥ್ರ್ಯದ ಈ ಜಲಾಶಯದಲ್ಲಿ ನೀರಿನ ಮಟ್ಟ 2901.85 ಅಡಿಗೆ ಏರಿಕೆಯಾಗಿದೆ. 880 ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ.

Translate »