ಜೂ. 18ರಿಂದ ದೇಶಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಡೀಸೆಲ್ ದರ ಏರಿಕೆ, ವಿಮಾ ಪ್ರೀಮಿಯಂ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಮಂಡನೆ

ಮೈಸೂರು:  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ಕಾನ್‍ಫೆಡರೇಷನ್ ಆಫ್ ಗೂಡ್ಸ್ ವೇಕಲ್ ಓನರ್ಸ್ ಅಸೋಷಿಯೇನ್ ಜೂ.18 ರಿಂದ ದೇಶಾದ್ಯಂತ ಎಲ್ಲಾ ಸರಕು ಸಾಗಾಣೆ ವಾಹನಗಳ ಸೇವೆಗಳನ್ನು ಸ್ಥಗಿತಗೊಳಿಸಿ, ಅನಿರ್ಧಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದೆ.

ಪೆಟ್ರೋಲ್-ಡೀಸೆಲ್ ದರ ಏರಿಕೆ, ವಾಹನ ಗಳ ಥರ್ಡ್ ಪಾರ್ಟಿ ವಿಮಾ ಪ್ರೀಮಿಯಂ ದರ ಹೆಚ್ಚಳ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿ ರುವ ಮುಷ್ಕರಕ್ಕೆ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಬೆಂಬಲ ನೀಡಿದ್ದು, ಅದರಂತೆ ಮೈಸೂರು ಡಿಸ್ಟ್ರಿಕ್ಟ್ ಟ್ರಕ್ಕರ್ಸ್ ಅಸೋಸಿಯೇಷನ್ ಸಹ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ಡಿಸ್ಟ್ರಿಕ್ಟ್ ಟ್ರಕ್ಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್.ಶ್ರೀನಿ ವಾಸರಾವ್, 2012ರಿಂದ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಲೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆಯಲ್ಲಿ ಇಳಿಕೆಯಾದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುತ್ತಿಲ್ಲ. ಪರಿಣಾಮ ಲಾರಿ ಮಾಲೀಕರು ಮಾತ್ರವಲ್ಲದೆ, ಅಂತಿಮ ವಾಗಿ ಸಾಮಾನ್ಯ ಜನರ ಮೇಲೆ ಹೊರೆಯಾ ಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲಾರಿ ಬಾಡಿಗೆಯು ದಿನನಿತ್ಯದ ಬೇಡಿಕೆ ಮತ್ತು ಪೂರೈಕೆ ಆಧಾರದಲ್ಲಿ ನಿಗದಿಯಾಗ ಲಿದೆ. ಈ ಹಿನ್ನೆಲೆಯಲ್ಲಿ ಡೀಸೆಲ್ ಬೆಲೆ ಹೆಚ್ಚಳದಿಂದ ಡೀಸೆಲ್‍ಗೆ ವೆಚ್ಚ ಮಾಡುವ ಹಣವನ್ನು ಬಾಡಿಗೆಯಲ್ಲಿ ಪಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕವಾಗಿ ಟೋಲ್ ಸಂಗ್ರಹ ಮಾಡ ಲಾಗುತ್ತಿದೆ. ಇದರಿಂದ ಹಲವು ಲಾರಿ ಮಾಲೀಕರು ಇಂತಹ ವೆಚ್ಚಗಳನ್ನು ನಿರ್ವಹಿಸಲು ಆಗದೇ ಪರಿತಪಿಸುವಂತೆ ವಾತಾವರಣ ನಿರ್ಮಾಣ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಯಾವುದೇ ಸರಕು ಸಾಗಾಣೆ ವಾಹನ ರಸ್ತೆಗಳಲ್ಲಿ ಸಂಚರಿಸಲು ಥರ್ಡ್ ಪಾರ್ಟಿ (ಮೂರನೇ ವ್ಯಕ್ತಿ) ವಿಮಾ ಪ್ರೀಮಿಯಂ ಪಡೆಯುವುದು ಕಡ್ಡಾಯ. 2002ರಿಂದ ಪ್ರತಿ ವರ್ಷ ಥರ್ಡ್ ಪಾರ್ಟಿ ವಿಮಾ ಪ್ರೀಮಿಯಂ ದರದಲ್ಲಿ ಹೆಚ್ಚಳ ಮಾಡಲಾಗು ತ್ತಿದೆ. ಪರಿಣಾಮ ಶೇ.1,117ರಷ್ಟು ಹೆಚ್ಚಳ ಗೊಂಡಿದ್ದು, ಇದರಿಂದ ಈ ಹಿಂದೆ 8 ರಿಂದ 9 ಸಾವಿರ ರೂ. ಇದ್ದ ಪ್ರೀಮಿಯಂ ದರ ಇದೀಗ 38 ಸಾವಿರ ರೂ.ಗೆ ಏರಿಕೆಯಾಗಿದೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜವಾಗಿಲ್ಲ ಎಂದರು. ಅಸೋಸಿಯೇಷನ್‍ನ ಗೌರವಾಧ್ಯಕ್ಷ ಶ್ರೀಕಂಠಸ್ವಾಮಿ, ಜಂಟಿ ಕಾರ್ಯದರ್ಶಿ ಗಳಾದ ಮಹೇಶ್, ಶ್ರೇಯಸ್ ಮತ್ತಿತರರು ಗೋಷ್ಠಿಯಲ್ಲಿದ್ದರು.