ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಾಪಸ್‍ಗೆ ಆಗ್ರಹಿಸಿ ಮೈಸೂರಲ್ಲಿ ಸ್ವಾತಂತ್ರ್ಯ ದಿನ ಪ್ರತಿಭಟನೆ
ಮೈಸೂರು

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಾಪಸ್‍ಗೆ ಆಗ್ರಹಿಸಿ ಮೈಸೂರಲ್ಲಿ ಸ್ವಾತಂತ್ರ್ಯ ದಿನ ಪ್ರತಿಭಟನೆ

August 13, 2020

ಮೈಸೂರು, ಆ.12(ಪಿಎಂ)- ಕರ್ನಾಟಕ ಭೂ ಸುಧಾ ರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಂದಿರುವ ತಿದ್ದುಪಡಿ ಯನ್ನು ಹಿಂಪಡೆಯಲು ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಸಂಘದ ರಾಜ್ಯ ಕೋರ್ ಕಮಿಟಿ ಸದಸ್ಯ ಹಾಗೂ ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್ ತಿಳಿಸಿದರು.

ಮೈಸೂರಿನ ವಾಲ್ಮೀಕಿ ರಸ್ತೆಯ ಲೀಲಾ ಚೆನ್ನಯ್ಯ ಸಮು ದಾಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮೈಸೂರಿನಲ್ಲೂ ಅಂದು ಡಿಸಿ ಕಚೇರಿ ಎದುರಿನಿಂದ ಪ್ರತಿಭಟನಾ ಮೆರವಣಿಗೆ ಹೊರಟು ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಧರಣಿ ಕೂರಲಾಗುವುದು. ಈ ಹೋರಾಟದ ನೇತೃತ್ವವನ್ನು ಸಂಘದ ಮುಖಂಡ ರಾದ ಚುಕ್ಕಿ ನಂಜುಂಡಸ್ವಾಮಿ ವಹಿಸಲಿದ್ದಾರೆ ಎಂದರು.

ಆ.15ರಿಂದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ಪ್ರಾರಂಭ ಮಾಡಲು ಉದ್ದೇ ಶಿಸಲಾಗಿತ್ತು. ಆದರೆ ಉತ್ತಮ ಮಳೆಯಾಗಿ ನಾಲೆಗಳಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ನಡೆಸುವ ಅಗತ್ಯತೆ ಎದುರಾಗಿರುವ ಕಾರಣ ಅನಿರ್ದಿಷ್ಟಾ ವಧಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದ್ದೇವೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಆಡಳಿತ ಪಕ್ಷದ ಶಾಸಕರು, ಇದು ವಿರೋಧ ಪಕ್ಷದ ಪ್ರಾಯೋಜಕತ್ವ ಎಂದು ಟೀಕಿಸಿದ್ದಾರೆ. ಅವರ ಹೇಳಿಕೆ ಯನ್ನು ರೈತ ಸಂಘ ಉಗ್ರವಾಗಿ ಖಂಡಿಸುತ್ತದೆ ಎಂದರು.

ಸಂಘದ ಜಿಲ್ಲಾ ಕಾರ್ಯದರ್ಶಿ ಇಮ್ಮಾವು ರಘು ಮಾತ ನಾಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆ ಯಲು ಆಗ್ರಹಿಸಿ ನಿರಂತರವಾಗಿ ಹೋರಾಟ ನಡೆಯುತ್ತಿ ದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸರ್ಕಾರ ಇದೇ ರೀತಿ ವರ್ತಿಸಿದರೆ ಮುಂದಿನ ದಿನಗಳಲ್ಲಿ ಸಾವಿರಾರು ಸಂಖ್ಯೆ ಯಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಎಚ್ಚರಿಸಿದರು. ಸಂಘದ ಗೌರವಾಧ್ಯಕ್ಷ ಕೆ.ಜಿ. ಶಿವಪ್ರಸಾದ್, ಜಿಲ್ಲಾ ಸಂಚಾಲಕ ಶಿರಮಳ್ಳಿ ಮಂಜು ನಾಥ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

Translate »