ಭಾರತದ ಸಹಕಾರ ಕ್ಷೇತ್ರ ಜಗತ್ತಲ್ಲೇ ಬಲಿಷ್ಠ
ಮೈಸೂರು

ಭಾರತದ ಸಹಕಾರ ಕ್ಷೇತ್ರ ಜಗತ್ತಲ್ಲೇ ಬಲಿಷ್ಠ

November 15, 2020

ಬೆಂಗಳೂರು, ನ.14-ಭಾರತದ ಸಹಕಾರ ಕ್ಷೇತ್ರ ಜಗತ್ತಿನಲ್ಲೇ ಅತ್ಯಂತ ಬಲಿಷ್ಠವಾಗಿದೆ. ದೇಶದಲ್ಲಿ ಒಟ್ಟು 8 ಲಕ್ಷ ಸಹಕಾರ ಸಂಸ್ಥೆಗಳಿದ್ದು, 28 ಕೋಟಿಗೂ ಹೆಚ್ಚು ಸದಸ್ಯರಿದ್ದಾರೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯ ಮಿತ ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ-2020 ಅನ್ನು ಉದ್ಘಾಟಿಸಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಜಗತ್ತಿಗೆ ಸಹಕಾರ ಕ್ಷೇತ್ರದಲ್ಲಿ ಭಾರತದ ಕೊಡುಗೆ ಮಹತ್ತರ ವಾದದ್ದು. ಭಾರತಕ್ಕೆ ಸಹಕಾರ ಕ್ಷೇತ್ರದಲ್ಲಿ ಕರ್ನಾ ಟಕದ ಕೊಡುಗೆ ಅಪಾರ. ಕರ್ನಾಟಕದಲ್ಲಿ ಇಂದು 45 ಸಾವಿರ ಸಹಕಾರ ಸಂಸ್ಥೆಗಳಿದ್ದು, 2 ಕೋಟಿಗೂ ಹೆಚ್ಚು ಸದಸ್ಯರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಇಂದು ಇಲ್ಲಿ ಆರಂಭವಾದ ಈ ಸಹಕಾರ ಸಪ್ತಾಹ ಒಟ್ಟು 7 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ನಡೆಯ ಲಿದ್ದು, ಪ್ರತಿ ದಿನ ಒಂದೊಂದು ವಿಷಯಗಳನ್ನು ಆಧರಿಸಿ ಆಚರಿಸಲಾಗುವುದು. ಇಂದಿನ ವಿಷಯ `ಕೊರೊನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ’ ಎಂದು ಹೇಳಿದರು.

ರಾಜ್ಯದಲ್ಲಿ ಕಳೆದ ಕೊರೊನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮತ್ತು ಜವಾಬ್ದಾರಿ ಯನ್ನು ಗೌರವಿಸಿ ಒಟ್ಟು 42,500 ಆಶಾ ಕಾರ್ಯ ಕರ್ತೆಯರಿಗೆ ತಲಾ 3 ಸಾವಿರ ಗೌರವ ಧನವನ್ನು ಸಹಕಾರ ಮಂಡಳದಿಂದ ನೀಡಲಾಗಿತ್ತು ಎಂದು ಸ್ಮರಿಸಿ ಕೊಂಡರು. ಪ್ರಧಾನಮಂತ್ರಿಗಳ ಆತ್ಮ ನಿರ್ಭರದಡಿ ರಾಜ್ಯದ ದುರ್ಬಲರನ್ನು ಆರ್ಥಿಕವಾಗಿ ಬಲಿಷ್ಠಗೊಳಿ ಸುವ ಉದ್ದೇಶದಿಂದ ರಾಜ್ಯದ ವಿವಿಧ ಕ್ಷೇತ್ರಗಳ ಬಡವ ರಿಗೆ ಸಹಕಾರ ಸಂಸ್ಥೆಗಳ ಮೂಲಕ 15 ಲಕ್ಷ ಜನರಿಗೆ 15 ಸಾವಿರ ಕೋಟಿ ಸಾಲ ನೀಡಲು ಯೋಜಿಸ ಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ರಾಜ್ಯದ ಸಹಕಾರ ಕ್ಷೇತ್ರವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ 4,750 ರೂ. ಮೊದಲ ಕಂತಾಗಿ ಬರಲಿದೆ ಎಂದರು.

ಮುಖ್ಯಮಂತ್ರಿಗಳ ಕೋವಿಡ್-19ರ ಪರಿಹಾರ ನಿಧಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮುಂದಾ ಳತ್ವದಲ್ಲಿ 53 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ದೇಣಿಗೆಯಾಗಿ ನೀಡಿರುವುದಕ್ಕೆ ನಾನು ವೈಯಕ್ತಿಕ ವಾಗಿ ಮತ್ತು ಸರ್ಕಾರದ ಪರವಾಗಿ ಅಭಿನಂದಿಸು ತ್ತೇನೆ ಎಂದರು. ಹಾಗೆಯೇ, ಸಹಕಾರ ಸಚಿವ ಸೋಮ ಶೇಖರ್ ಅವರ ಮಾರ್ಗದರ್ಶನದಲ್ಲಿ ರಾಜ್ಯದ 42,524 ಆಶಾ ಕಾರ್ಯಕರ್ತೆಯರಿಗೆ ತಲಾ 3,000 ರೂ. ಗಳಂತೆ ಒಟ್ಟು 12.75 ಕೋಟಿ ರೂ.ಗಳ ಪ್ರೋತ್ಸಾಹ ಧನವನ್ನು ಸಹಕಾರ ಸಂಸ್ಥೆಗಳು ವಿತರಿಸಿರುವುದು ಕೂಡ ಇಡೀ ದೇಶಕ್ಕೆ ಮಾದರಿ ಎನಿಸಿದ್ದು, ಶೇ.100ರಷ್ಟು ಗುರಿ ಸಾಧನೆ ಮಾಡಿರುವುದು ಕೂಡ ಹೆಮ್ಮೆಯ ವಿಚಾರವಾಗಿದೆ. ಆಥಿರ್üಕ ಸ್ವಾವಲಂಬನೆಗೆ ನೆರವು, ಕೋವಿಡ್-19ರ ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ಕೃಷಿ ಸಾಲ ಒದಗಿಸಲು ಕೇಂದ್ರ ಸರ್ಕಾರವು “Sಠಿeಛಿiಚಿಟ ಐiquiಜiಣಥಿ ಈಚಿಛಿiಟiಣಥಿ’’ ಅಡಿಯಲ್ಲಿ 1700 ಕೋಟಿ ರೂ.ಗಳನ್ನು ನಬಾರ್ಡ್ ಮೂಲಕ ಡಿಸಿಸಿ ಬ್ಯಾಂಕುಗಳಿಗೆ ನೀಡಲಾಗಿದ್ದು, ರೈತರ ಸಂಕಷ್ಟದ ಸಮಯದಲ್ಲಿ ಕೃಷಿಗೆ ಅವಶ್ಯಕವಾದ ಸಾಲವನ್ನು ಒದಗಿಸಲಾಗಿದೆ. ಇದರಿಂದ ಸಹಕಾರ ಸಂಸ್ಥೆಗಳ ಸದಸ್ಯರು ಕಿಸಾನ್ ಕ್ರೆಡಿಟ್ ಕಾರ್ಡ್ (ರೂಪೇ ಕಾರ್ಡ್) ಮೂಲಕ ಆರ್ಥಿಕ ನೆರವು ಪಡೆದು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲಾಕ್‍ಡೌನ್ ಸಂದರ್ಭದಲ್ಲಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಹಾಗೂ ಆರ್ಥಿಕವಾಗಿ ಅಬಲರಾದವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ 20 ಲಕ್ಷ ಕೋಟಿ ರೂ.ಗಳ ಬೃಹತ್ ಮೊತ್ತದ ಪ್ಯಾಕೇಜನ್ನು ಘೋಷಿಸಿದ್ದಾರೆ. ಈಗಾಗಲೇ ಸಹಕಾರ ಇಲಾಖೆಯ ಮೂಲಕ 39,600 ಕೋಟಿ ರೂ.ಗಳನ್ನು `ಆರ್ಥಿಕ ಸ್ಪಂದನ’ ಕಾರ್ಯಕ್ರಮದ ಮೂಲಕ ಸಚಿವ ಸೋಮಶೇಖರ್ ಅವರು ರಾಜ್ಯಾದ್ಯಂತ ಸಂಚರಿಸಿ ರೈತರು, ಸಾಮಾನ್ಯಜನರು, ಮೀನುಗಾರರು, ಹೈನುಗಾರರು ಸೇರಿದಂತೆ ವಿವಿಧ ವಲಯಗಳ ಜನರಿಗೆ ಸಾಲ ವಿತರಣೆ ಮಾಡಿರುವುದು ಕೂಡ ಅತ್ಯಂತ ಸಂತೋಷದ ವಿಚಾರವಾಗಿದೆ. ರಾಜ್ಯ ಸರ್ಕಾರ ಸಹಕಾರ ವಲಯಕ್ಕೆ ಪ್ರೋತ್ಸಾಹ ನೀಡುತ್ತಲೇ ಬಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸ್ವಾತಂತ್ರ್ಯಪೂರ್ವದಲ್ಲಿ ಮಹಾತ್ಮಗಾಂಧಿ ಅವರ ಪ್ರೇರಣೆಯಿಂದ ಆರಂಭವಾದ ಸಹಕಾರ ಕ್ಷೇತ್ರ ಇಂದು ಕೃಷಿಯಿಂದ ಹಿಡಿದು ಅನೇಕ ಕ್ಷೇತ್ರಗಳಲ್ಲಿ ಯಶಸ್ವಿಯಾಗಿದೆ. ರಾಜ್ಯದ ಸಹಕಾರ ಸಂಸ್ಥೆಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು. ಕೋವಿಡ್-19 ಸಮಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 53 ಕೋಟಿ ರೂ.ಗಳನ್ನು ನೀಡಿತ್ತು. ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಯಡಿಯಲ್ಲಿ ಕೃಷಿ ಕ್ಷೇತ್ರ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಬನೆ ಬೆಳೆಸಲು ಕೃಷಿ, ಹಾಲು ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ಆರ್ಥಿಕ ಸ್ಪಂದನೆ ಮೂಲಕ 39 ಕೋಟಿ ರೂ. ಸಾಲ ನೀಡಲಾಗಿದೆ. ಸಹಕಾರ ಕ್ಷೇತ್ರ ಮತ್ತಷ್ಟು ಬೆಳೆಯಲಿ, ಸಪ್ತಾಹ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ ಅವರು, ಸಹಕಾರ ಪ್ರಶಸ್ತಿಗೆ ಭಾಜನರಾದ ಸಹಕಾರ ಕ್ಷೇತ್ರದ ಸಾಧಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಹಕಾರ ಕ್ಷೇತ್ರವನ್ನು ವಿಸ್ತರಿಸಲು ಈ ಸಹಕಾರ ಸಪ್ತಾಹ ಸಹಾಯವಾಗಲಿದೆ ಎಂದರು. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ವೇದಿಕೆಯ ಮೇಲಿದ್ದ ಗಣ್ಯರು ಮಹಾಮಂಡಳ ಕಾರ್ಯಚಟುವಟಿಕೆಗಳ ಕೈಪಿಡಿ ಹಗೂ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವ ರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಸೇರಿದಂತೆ ಅನೇಕ ಶಾಸಕರು ಹಾಗೂ ಸಹಕಾರಿ ಧುರೀಣರು ಉಪಸ್ಥಿತರಿದ್ದರು. ಸಹಕಾರ ಇಲಾಖೆಯ ಕಾರ್ಯದರ್ಶಿ ತುಷಾರ್ ರಂಗನಾಥ್ ಅವರು ಸ್ವಾಗತಿಸಿದರು.

 

Translate »