ಮೈಸೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿ ಯಿಂದ ಡಿ.22, 23ರಂದು ಪಿರಿಯಾಪಟ್ಟಣದಲ್ಲಿ ನಡೆಯುವ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇ ಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತ, ಸಾಹಿತಿ ಹಾಗೂ ಸಂಸ್ಕøತಿ ಚಿಂತಕ ಇಂದೂಧರ ಹೊನ್ನಾಪುರ ಅವರನ್ನು ಆಯ್ಕೆ ಮಾಡಲಾಗಿದೆ.ನಗರದ ಜಿಲ್ಲಾ ಕಸಾಪ ಸಭಾಂ ಗಣದಲ್ಲಿ ಜಿಲ್ಲಾಧ್ಯಕ್ಷ ವೈ.ಡಿ.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಯಲ್ಲಿ ಸರ್ವಾನುಮತದಿಂದ ಈ ನಿರ್ಣಯವನ್ನು ಕೈಗೊಳ್ಳಲಾಯಿತು.