ಇನ್ಫೋಸಿಸ್ ಗಾರ್ಡನ್ ಕಾರ್ಮಿಕರ ಪ್ರತಿಭಟನೆ
ಮೈಸೂರು

ಇನ್ಫೋಸಿಸ್ ಗಾರ್ಡನ್ ಕಾರ್ಮಿಕರ ಪ್ರತಿಭಟನೆ

June 8, 2018

ಮೈಸೂರು: ಕಾರ್ಮಿಕ ವಿರೋಧಿ ನೀತಿ ಅನುಸರಿಸುವ ಮೂಲಕ ಕಾರ್ಮಿಕರ ಕೆಲಸಕ್ಕೆ ಕುತ್ತು ತರಲಾಗುತ್ತಿದೆ ಎಂದು ಆರೋಪಿಸಿ ಇನ್ಫೋಸಿಸ್ ಗಾರ್ಡನ್ ಕಾರ್ಮಿಕರು ಎಐಟಿಯುಸಿ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ಸಂಸ್ಥೆಯ 4ನೇ ಗೇಟ್ ಎದುರು ಜಮಾಯಿಸಿದ ನೂರಾರು ಕಾರ್ಮಿಕರು, 10, 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಈಗ ಇದ್ದಕ್ಕಿದ್ದಂತೆ ರಾಜೀನಾಮೆ ಕೊಡಲು ಒತ್ತಾಯ ಮಾಡಲಾಗುತ್ತಿದೆ. ಇದರಿಂದ ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ.

30ಕ್ಕೂ ಹೆಚ್ಚು ಮಹಿಳೆಯರು ಹಾಗೂ 60ಕ್ಕೂ ಹೆಚ್ಚು ಪುರುಷರು ಇಲ್ಲಿ ಗುತ್ತಿಗೆ ಆಧಾರದಲ್ಲಿ ಗಾರ್ಡನ್ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ ಈಗ ಸಂಸ್ಥೆಯವರು ಗುತ್ತಿಗೆ ಬದಲಿಸುವ ನೆಪದಲ್ಲಿ ನಮ್ಮನ್ನು ಕೆಲಸದಿಂದ ತೆಗೆಯುವ ಪ್ರಯತ್ನ ಮಾಡುತ್ತಿದ್ದಾರೆ. ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕರ ಸಮಸ್ಯೆ ಬಗೆಹರಿಸದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಇಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ನಾಳೆಯೂ ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನೆ ನಡೆಸಲಿದ್ದಾರೆ.

Translate »