ಗಗನಚುಕ್ಕಿ ಜಲಪಾತದ ಮೂಲ ಸೌಕರ್ಯ ಅಭಿವೃದ್ಧಿ
ಮಂಡ್ಯ

ಗಗನಚುಕ್ಕಿ ಜಲಪಾತದ ಮೂಲ ಸೌಕರ್ಯ ಅಭಿವೃದ್ಧಿ

August 2, 2018

ಮಂಡ್ಯ: ಗಗನಚುಕ್ಕಿ ಜಲಪಾತ ಧುಮ್ಮಿಕ್ಕಿ ಭೋರ್ಗರೆಯುತ್ತಾ ರಾಜ್ಯದ ಹಾಗೂ ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಅತ್ಯಾವಶ್ಯಕ ಮೂಲ ಸೌಲಭ್ಯಗಳನ್ನು ಗಗನಚುಕ್ಕಿ ಜಲಪಾತ ಪ್ರವಾಸಿ ತಾಣದಲ್ಲಿ ಆದ್ಯತೆ ಮೇಲೆ ಅಭಿವೃದ್ಧಿ ಪಡಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಹರೀಶ್ ತಿಳಿಸಿದ್ದಾರೆ.

ಪ್ರವಾಸಿಗರ ಅನುಕೂಲಕ್ಕಾಗಿ ಸ್ಥಳೀಯ ಗ್ರಾಪಂ ಮೂಲಕ ಉಚಿತ ಕುಡಿಯುವ ನೀರಿನ ವ್ಯವಸ್ಥೆ, ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ಮಹಿಳೆಯರ ಮತ್ತು ಪುರುಷರ ಪ್ರತ್ಯೇಕ ಶೌಚಾಲಯಗಳ ನ್ನೊಳಗೊಂಡ ಶೌಚಾಲಯ ಬ್ಲಾಕ್‍ಗಳ ನಿರ್ಮಾಣ, ಸಾವಿರ ವಾಹನ ನಿಲುಗಡೆ ಮಾಡಲು ವಿಶಾಲವಾದ ವಾಹನ ಪಾರ್ಕಿಂಗ್ ಅಭಿವೃದ್ಧಿ, ಮಳವಳ್ಳಿ ತಾಲೂಕು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಒಬ್ಬರು ವೈದ್ಯರು ಹಾಗೂ ಇತರೆ ಸಹಾಯಕ ಸಿಬ್ಬಂದಿ ಗಳನ್ನೊಳಗೊಂಡ ತಾತ್ಕಾಲಿಕ ಆಸ್ಪತ್ರೆ ಮತ್ತು ಪ್ರಥಮ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗಿದೆ.

ಗಗನಚುಕ್ಕಿ ಜಲಪಾತ ಪ್ರದೇಶದಲ್ಲಿ ಬೆಳೆದಿದ್ದ ಗಿಡ ಗಂಟಿಗಳನ್ನು ಸ್ವಚ್ಛಗೊಳಿಸಿ ಇತರೆ ತ್ಯಾಜ್ಯ ವಸ್ತುಗಳು ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ತೆರವುಗೊಳಿಸಲಾಗಿದ್ದು, ಪ್ರವಾಸಿ ತಾಣದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯತೆ ಕಾಪಾಡಲಾಗಿದೆ. ಜಲಪಾತ ವೀಕ್ಷಿಸಲು ಅನುವು ಮಾಡಿಕೊಡುವ ಸಲುವಾಗಿ 300 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಪ್ರವಾಸಿ ಮಿತ್ರ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಿ ವ್ಯವಸ್ಥಿತವಾಗಿ ಸರತಿ ಸಾಲಿ ನಲ್ಲಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹಾಗೂ ನಿರ್ದೇಶಕರು ಸ್ಥಳಕ್ಕೆ ಭೇಟಿ ಪ್ರವಾಸಿ ತಾಣದ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದ್ದರು. ಅಲ್ಲದೇ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಅನಿಲ್‍ಕುಮಾರ್ ಹಾಗೂ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಗಗನಚುಕ್ಕಿ ಜಲ ಪಾತದಲ್ಲಿ ಮೂಲ ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದ ಹಿನ್ನೆಲೆ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಸಹಯೋಗದಲ್ಲೇ ವ್ಯವಸ್ಥಿತವಾಗಿ ಶೌಚಾಲಯ, ಕುಡಿ ಯುವ ನೀರು ಸೇರಿದಂತೆ ಇತರೆ ಸೌಕರ್ಯವನ್ನು ಪ್ರವಾಸಿಗರಿಗೆ ಕಲ್ಪಿಸ ಲಾಗಿದೆ ಎಂದು ಅವರು ತಿಳಿಸಿದ್ದಾರೆ.

Translate »