ಮಡಿಕೇರಿಯಲ್ಲಿ ವಿಚಾರಣಾಧೀನ ಕೈದಿ ಸಾವು
ಕೊಡಗು

ಮಡಿಕೇರಿಯಲ್ಲಿ ವಿಚಾರಣಾಧೀನ ಕೈದಿ ಸಾವು

April 26, 2018

ಮಡಿಕೇರಿ: ನಗರದ ಕೇಂದ್ರ ಕಾರಾಗೃಹದಲ್ಲಿ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೈದಿಯೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾಳೆಲೆಯ ದೇವನೂರು ನಿವಾಸಿ ಮುತ್ತ(32) ಮೃತಪಟ್ಟ ವಿಚಾರಣಾಧೀನ ಕೈದಿಯಾಗಿದ್ದಾನೆ, ಮಂಗಳವಾರ ಸಂಜೆ ವೇಳೆ ಬ್ಯಾರಕ್‍ನಲ್ಲಿದ್ದ ಮುತ್ತನಿಗೆ ಎದೆನೋವು ಕಾಣ ಸಿಕೊಂಡಿತ್ತು. ಜೈಲು ಸಿಬ್ಬಂದಿ ಆತನನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುತ್ತ ಮೃತಪಟ್ಟಿದ್ದಾನೆ.

ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಸಮ್ಮುಖದಲ್ಲಿ ಮೃತ ದೇಹದ ಮಹಜರು ನಡೆಸಲಾಯಿತು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »