ಮೈಸೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೈಸೂರು ತಾಲೂಕಿನ ಸೋಮೇಶ್ವರಪುರದ ಶ್ರೀಕಂಠಪ್ಪ ಅವರ ಪುತ್ರ, ಮನೋಜ್ (16) ಮೃತ ವಿದ್ಯಾರ್ಥಿ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮನೋಜ್, ಜೂ.22 ರಂದು ಸಹೋದರ ರಾಹುಲ್ ನೊಂದಿಗೆ ಬೈಕ್‍ನಲ್ಲಿ ಜಮೀನಿಗೆ ತೆರಳುತ್ತಿದ್ದಾಗ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ರಾಹುಲ್‍ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮನೋಜ್ ತೀವ್ರವಾಗಿ ಗಾಯ ಗೊಂಡಿದ್ದ. 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಮನೋಜ್‍ಗೆ ಚಿಕಿತ್ಸೆ ನೀಡಲಾಗಿ ತ್ತಾದರೂ, ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.