ಎಸ್‍ಡಿಪಿಐ, ಪಿಎಫ್‍ಐ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷದ್‍ನಿಂದ ಡಿಸಿಗೆ ಮನವಿ ಸಲ್ಲಿಕೆ
ಮೈಸೂರು

ಎಸ್‍ಡಿಪಿಐ, ಪಿಎಫ್‍ಐ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷದ್‍ನಿಂದ ಡಿಸಿಗೆ ಮನವಿ ಸಲ್ಲಿಕೆ

August 14, 2020

ಮೈಸೂರು, ಆ.13(ಪಿಎಂ)- ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳು ಕಾರಣ ಎಂದು ಆರೋಪಿಸಿ ಹಾಗೂ ಈ ಎರಡೂ ಸಂಘಟನೆಗಳನ್ನು ನಿಷೇಧಿಸಲು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಮೈಸೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ ಅವರನ್ನು ಭೇಟಿ ಮಾಡಿದ ಪರಿಷದ್‍ನ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಗಲಭೆಯಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡಿ ರುವ ಕಿಡಿಗೇಡಿಗಳು, ಅಮಾಯಕರ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿ, ಮಾಧ್ಯಮದವರ ಮೇಲೂ ಹಲ್ಲೆ ನಡೆಸಿದ್ದು, ಇದು ಪೂರ್ವಯೋಜಿತ ಕೃತ್ಯ. ಅತ್ಯಂತ ವ್ಯವಸ್ಥಿತವಾಗಿ ನಡೆಸಿ, ಸಮಾಜಕ್ಕೆ ಅಪಾರ ನಷ್ಟ ಉಂಟು ಮಾಡಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇದರ ಹಿಂದಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಗಲಭೆ ನಿಯಂತ್ರಿಸಲು ಪೊಲೀಸರು ನಡೆಸಿದ ಗೋಲಿಬಾರ್‍ನಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಬಾರದು.

ಗಲಭೆಯಿಂದ ಸಂತ್ರಸ್ತರಾಗಿರುವ ಅಮಾಯಕ ಹಿಂದೂಗಳಿಗೆ ದುಷ್ಕøತ್ಯ ನಡೆಸಿದ ದುಷ್ಕರ್ಮಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿ ಪರಿಹಾರ ನೀಡಬೇಕು. ಈ ಗಲಭೆ ಪ್ರಕರಣವನ್ನು ಎನ್‍ಐಎ (ರಾಷ್ಟ್ರೀಯ ತನಿಖಾ ದಳ) ತನಿಖೆಗೊಳಪಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಶ್ವ ಹಿಂದೂ ಪರಿಷದ್ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ಬಾಬು, ಕಾರ್ಯದರ್ಶಿ ಪ್ರದೀಶ್‍ಕುಮಾರ್, ಪದಾಧಿಕಾರಿಗಳಾದ ರಮೇಶ್, ಸಂಜಯ್, ಮೀರಾಬಾಯಿ ಮನವಿ ಸಲ್ಲಿಸಿದರು.

Translate »