ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕೆ.ಮರೀಗೌಡರ ಕಣಕ್ಕಿಳಿಸಲು ಒತ್ತಾಯ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕೆ.ಮರೀಗೌಡರ ಕಣಕ್ಕಿಳಿಸಲು ಒತ್ತಾಯ

February 16, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡರನ್ನು ಕಣಕ್ಕಿಳಿಸುವಂತೆ ಕೆ.ಮರಿಗೌಡ ಅಭಿ ಮಾನಿಗಳ ಬಳಗದ ಮುಖಂಡ, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಮೆಲ್ಲಹಳ್ಳಿ ಮಹದೇವಸ್ವಾಮಿ ಒತ್ತಾ ಯಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷದಿಂದ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುತ್ತಿರುವ ಕೆ.ಮರೀಗೌಡ ಅವರು ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ ರಾಗಿರುವ ಮರೀಗೌಡರು ಈ ಹಿಂದೆ ಜಿ.ಪಂ ಅಧ್ಯಕ್ಷರಾಗಿದ್ದ ವೇಳೆ ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಿ ತನ್ನದೇ ವರ್ಚಸ್ಸು ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿ ಸಬೇಕೆಂದು ಅವರು ಮನವಿ ಮಾಡಿದರು.

1983ರಿಂದಲೂ ಗ್ರಾಮೀಣ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ ಕೆಪಿಸಿಸಿ ಸದಸ್ಯರಾಗಿಯೂ ಪಕ್ಷ ಸಂಘಟನೆಗೆ ಶ್ರಮಿಸಿ ದ್ದಾರೆ. ಪಕ್ಷಕ್ಕೆ ನಿಷ್ಠಾವಂತರಾಗಿ ಸೇವೆ ಸಲ್ಲಿಸಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಯಶಸ್ವಿ ಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದನ್ನು ಮನಗಂಡು ಪಕ್ಷದ ಮುಖಂಡರು ಟಿಕೆಟ್ ನೀಡಬೇಕೆಂದು ಕೋರಿದರು. ಮೈಸೂರು-ಕೊಡಗು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಯಾಗಿದೆ. ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಿದ್ದಾರೆ. ಎರಡೂ ಜಿಲ್ಲೆಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಮತದಾರರ ಸಂಖ್ಯೆ ಹೆಚ್ಚಾಗಿರುವುದ ರಿಂದ ಈ ಬಾರಿ ಮೈಸೂರು-ಕೊಡಗು ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಬೇಕೆಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ಕೆ.ಮರೀಗೌಡ ಅಭಿಮಾನಿ ಬಳಗದ ಮುಖಂಡ ರಾದ ಎಪಿಎಂಸಿ ಅಧ್ಯಕ್ಷ ಪ್ರಭು, ಜವರಪ್ಪ, ದೂರ ನಾಗರಾಜು, ಕೃಷ್ಣ ಇದ್ದರು.

Translate »