ಡೆಂಗ್ಯೂ ನಿಯಂತ್ರಣಕ್ಕಾಗಿ ಅಧಿಕಾರಿಗಳಿಂದ ಪರಿಶೀಲನೆ
ಹಾಸನ

ಡೆಂಗ್ಯೂ ನಿಯಂತ್ರಣಕ್ಕಾಗಿ ಅಧಿಕಾರಿಗಳಿಂದ ಪರಿಶೀಲನೆ

June 8, 2018

ಹಾಸನ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಗುರುವಾರ ಸರ್ಕಾರಿ ಕಚೇರಿಗಳ ಸ್ವಚ್ಛತೆ ಹಾಗೂ ನೀರು ನಿಂತಿರುವ ಬಗ್ಗೆ ಪರಿಶೀಲಿಸಿದರು.

ಈ ವೇಳೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಾಜ್ ಗೋಪಾಲï ಮಾತನಾಡಿ, ಸೊಳ್ಳೆ ಯಿಂದ ಹರಡಬಹುದಾದ ರೋಗದ ಬಗ್ಗೆ ಮಾಹಿತಿ ನೀಡಿದರು. ಡೆಂಗ್ಯೂ ಜೂನ್ ಮತ್ತು ಜುಲೈನಲ್ಲಿ ಹರಡುವುದು ಹೆಚ್ಚು. ಮಳೆ ಬಂದು ಕಡಿಮೆಯಾದ ಸಮಯ ದಲ್ಲಿ ಲಾರ್ವ ಉತ್ಪತ್ತಿಯಾಗುತ್ತದೆ. ಕಳೆದ ಬಾರಿ ಪ್ರಕರಣ ಕಾಣ ಸಿಕೊಂಡಿದ್ದರೂ ಯಾವುದೇ ಸಾವು ಸಂಭವಿಸಿರಲಿಲ್ಲ. ಈ ಬಾರಿಯೂ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದರು.

ಡೆಂಗ್ಯೂ ಜ್ವರ ವೈರಸ್‍ನಿಂದ ಉಂಟಾ ಗುವ ಕಾಯಿಲೆ. ಇದು ಸೋಂಕು ಹೊಂದಿದ ಈಡೀಸ್ ಈಜಿಪ್ಟೈ ಸೊಳ್ಳೆಯ ಕಚ್ಚುವಿಕೆ ಯಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತಾ ನೋತ್ಪತ್ತಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಮನುಷ್ಯರಿಗೆ ಕಚ್ಚುತ್ತವೆ ಎಂದು ಹೇಳಿದರು.

ಇದ್ದಕ್ಕಿದ್ದಂತೆ ಆಗಾಗ್ಗೆ ತೀವ್ರ ಜ್ವರ, ವಿಪರೀತ ತಲೆ ನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲು ಗಳಲ್ಲಿ ವಿಪರೀತ ನೋವು ಕಾಣ ಸಿಕೊಳ್ಳು ತ್ತದೆ. ಜ್ವರ ತೀವ್ರವಾದ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ರಕ್ತನಾಳಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಚಿಹ್ನೆಗಳು ಕಾಣ ಸುವುದು ಈ ಕಾಯಿಲೆ ಯ ಲಕ್ಷಣವಾಗಿದೆ ಎಂದು ತಿಳಿಸಿದರು.

ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ವಾದ ಔಷಧಿ ಅಥವಾ ಲಸಿಕೆ ಇಲ್ಲ. ರೋಗ ಲಕ್ಷಣಗಳಿಗೆ ಅನುಸಾರವಾಗಿ ವೈದ್ಯರಿಂದ ಚಿಕಿತ್ಸೆ ಪಡೆಯಬಹುದು.

ಈ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ತಿಳಿಸಿದರು.

Translate »