ತನಿಖಾಧಿಕಾರಿ ಶಿವಯೋಗಿ ಕಳಸದ್ ಆಸ್ಪತ್ರೆಗೆ ಭೇಟಿ, ಮಾಹಿತಿ ಸಂಗ್ರಹ
ಚಾಮರಾಜನಗರ

ತನಿಖಾಧಿಕಾರಿ ಶಿವಯೋಗಿ ಕಳಸದ್ ಆಸ್ಪತ್ರೆಗೆ ಭೇಟಿ, ಮಾಹಿತಿ ಸಂಗ್ರಹ

May 5, 2021

ಚಾಮರಾಜನಗರ, ಮೇ 4 (ಎಸ್‍ಎಸ್)- ಚಾಮರಾಜನಗರ ಜಿಲ್ಲಾ ಆಸ್ಪತ್ರೆ ಯಲ್ಲಿ ಸಂಭವಿಸಿದ ಕೋವಿಡ್ ಸೋಂಕಿ ತರ ಸಾವು ಪ್ರಕರಣದ ಸಂಬಂಧ ತನಿಖೆ ನಡೆಸಿ ವರದಿ ನೀಡಲು ವಿಚಾರಣಾಧಿಕಾರಿ ಯಾಗಿ ನೇಮಕವಾಗಿರುವ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಅವರು ಇಂದು ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ, ಅಧಿ ಕಾರಿಗಳಿಂದ ಮಾಹಿತಿ ಪಡೆದರು.
ಬೆಳಗ್ಗೆ 9.45ರ ಸಮಯದಲ್ಲಿ ಆಸ್ಪತ್ರೆಗೆ ಆಗಮಿಸಿದ ತನಿಖಾಧಿಕಾರಿಗಳು, ಮೊದಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವೈದ್ಯಾ ಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಮೇ 2ರ ಸೋಮವಾರ ಬೆಳಗ್ಗೆಯಿಂದ ಮೇ 3ರ ಬೆಳಗ್ಗೆ ವರೆಗೆ ಸಂಭವಿಸಿದ ದುರಂತದ ಬಗ್ಗೆ ಮಾಹಿತಿ ಕಲೆ ಹಾಕಿದರು.
ನಂತರ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಿರುವ ಆಕ್ಸಿಜನ್ ಪ್ಲಾಂಟ್ ವೀಕ್ಷಿಸಿದರಲ್ಲದೆ, ಆಕ್ಸಿಜನ್ ಸಿಲಿಂಡರ್ ಗಳನ್ನು ಸಂಗ್ರಹಿಸಿರುವ ಕೊಠಡಿಗೆ ತೆರಳಿ ಪರಿಸ್ಥಿತಿ ಆವಲೋಕಿಸಿದರು.

ಬಳಿಕ ಆಸ್ಪತ್ರೆಯಲ್ಲಿದ್ದ ಕೆಲ ರೋಗಿಗಳು ಹಾಗೂ ಸಂಬಂಧಿಕರೊಂದಿಗೆ ಮಾತ ನಾಡಿ, ಸಮಸ್ಯೆ ಆಲಿಸಿದರು. ಈ ವೇಳೆ ಕೆಲ ಮುಖಂಡರು, ಆಕ್ಸಿಜನ್ ಕೊರತೆಯಿಂ ದಲೇ ಕೊರೊನಾ ಸೋಂಕಿತರು ಸಾವನ್ನ ಪ್ಪಿದ್ದಾರೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ಮೃತರ ಕುಟುಂಬಗಳಿಗೆ ನ್ಯಾಯ ದೊರಕಿಸುವಂತೆ ಮನವಿ ಮಾಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಯೋಗಿ ಕಳಸದ್ ಅವರು, ಪ್ರಕರಣ ಸಂಬಂಧ ಜಿಲ್ಲಾಧಿ ಕಾರಿಗಳು ಹಾಗೂ ವೈದ್ಯರ ಸಭೆ ನಡೆಸಿ, ಮಾಹಿತಿ ಸಂಗ್ರಹಿಸಲಾಗಿದೆ.

ತನಿಖೆ ಪ್ರಾಥಮಿಕ ಹಂತದಲ್ಲಿದೆ. ಈ ವೇಳೆ ಎಲ್ಲವನ್ನೂ ಹೇಳಲು ಆಗುವುದಿಲ್ಲ. ಪ್ರಕರಣದ ವರದಿಯನ್ನು ಸಲ್ಲಿಸಲು ಸರ್ಕಾರದಿಂದ 3 ದಿನಗಳ ಕಾಲಾವಕಾಶ ನೀಡಲಾಗಿದೆ. ವರದಿಯಲ್ಲಿ ಎಲ್ಲವನ್ನೂ ಸಂಪೂರ್ಣವಾಗಿ ತಿಳಿಸುತ್ತೇನೆ ಎಂದರ ಲ್ಲದೆ, ಚಾಮರಾಜನಗರ ಬಳಿಕ ಮೈಸೂ ರಿನ ಆಕ್ಸಿಜನ್ ಪ್ಲಾಂಟ್‍ಗೂ ಭೇಟಿ ನೀಡುವುದಾಗಿ ತಿಳಿಸಿ ನಿರ್ಗಮಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ವೈದ್ಯಕೀಯ ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಡಾ.ಸಂಜೀವ್ ಜಿಲ್ಲಾ ಸರ್ಜನ್ ಡಾ.ಮುರುಗೇಶ್ ಇತರರಿದ್ದರು.

Translate »