ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯÁದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಮಂಡ್ಯ

ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯÁದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

April 28, 2021

ಮಂಡ್ಯ, ಏ.27- ಕೋವಿಡ್-19 ಎರಡನೇ ಅಲೆಯಿಂದ ಜಿಲ್ಲೆಯÁದ್ಯಂತ ಕೋವಿಡ್ ಸೋಂಕಿತರು ಹೆಚ್ಚಾಗುತ್ತಿದ್ದು, ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸಿ, ಚಿಕಿತ್ಸೆ ನೀಡಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್ ಸೌಹಾದರ್Àಯುತವಾಗಿ ನಡೆದುಕೊಳ್ಳಬೇಕು. ಎಲ್ಲಕ್ಕಿಂತ ಪ್ರಮುಖ ವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಆಕ್ಸಿಜನ್ ವ್ಯವಸ್ಥೆ ಇರುವ ಆಂಬುಲೆನ್ಸ್ ಪ್ರತಿ ತಾಲೂಕಿನಲ್ಲೂ ಲಭ್ಯವಿರಬೇಕು. ಕೊರೊನಾ ಟೆಸ್ಟಿಂಗ್ ಮಾಡಿಸಿದವರು ಫಲಿತಾಂಶ ಬರುವ ತನಕ ಕ್ವಾರಂಟೈನ್ ಆಗಿರುವಂತೆ ನೋಡಿಕೊಳ್ಳಬೇಕು. ಅಲ್ಲದೆ ಆಸ್ಪತ್ರೆಗಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಶ್ರಮವಹಿಸಿ, ಪ್ರತಿ ತಾಲೂಕಿ ನಲ್ಲೂ ಚಿಕಿತ್ಸೆಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಯÁವುದೇ ಪರಿಸ್ಥಿತಿ ಯಲ್ಲೂ ಜಿಲ್ಲೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಲಾಕ್‍ಡೌನ್ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಪೆÇಲೀಸರು ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ಆಸ್ಪತ್ರೆಗಳಲ್ಲಿಯೂ ಯÁವುದೇ ರೀತಿಯ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು. ಎಲ್ಲ ತಾಲೂಕು ಆಸ್ಪತ್ರೆಯಲ್ಲಿ ಹಾಗೂ ಹಾಸ್ಟೆಲ್ ಗಳಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಿ ಎಂದು ಸಚಿವರು ಹೇಳಿದರು.

ಜಿಲ್ಲಾ ಕೇಂದ್ರ ಮಂಡ್ಯದಲ್ಲಿ ಹೆಚ್ಚು ವರಿಯÁಗಿ ಎರಡು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಬೇಕು. ಅಲ್ಲದೇ ಪ್ರತಿ ತಾಲೂಕು ಕೇಂದ್ರದಲ್ಲೂ ಎರಡಕ್ಕಿಂತ ಹೆಚ್ಚು ಸುಸಜ್ಜಿತ ಆಂಬ್ಯುಲೆನ್ಸ್ ಇರಬೇಕು. ಜಿಲ್ಲೆಯಲ್ಲಿ ಪಿಪಿಇ ಕಿಟ್, ಗ್ಲೌಸ್, ಸ್ಯಾನಿಟೈಸರ್ ಸೇರಿದಂತೆ ಯÁವುದು ಕೂಡ ಕೊರತೆ ಆಗಬಾರದು ಎಂದರು.

ಪೆÇಲೀಸ್ ಇಲಾಖೆ ಅಂಗಡಿ ಮುಂಗÀ್ಗಟ್ಟುಗಳನ್ನು ಬಂದ್ ಮಾಡಿಸುವಾಗ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಂಗಡಿಗಳನ್ನು ಮುಚ್ಚಿಸಿ. ಸೋಂಕಿತರ ಪ್ರಥಮ ಸಂಪರ್ಕಿತರನ್ನು 30 ಜನ, ದ್ವಿತೀಯ ಸಂಪರ್ಕಿತರನ್ನು 50 ಜನ ಗುರುತಿಸಿ ಪರೀಕ್ಷೆ ನಡೆಸಬೇಕು. ಎಲ್ಲಾ ಆರೋಗ್ಯ ಉಪಕೇಂದ್ರಗಳಲ್ಲಿ ಲಸಿಕೆ ನೀಡುವ ಕೆಲಸವನ್ನು ಮಾಡುವಂತೆ ಹೇಳಿದರು.

ಕೋವಿಡ್ ಕೆಲಸದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ವೈದ್ಯರು ಕೋವಿಡ್ ಪಾಸಿಟಿವ್ ಆದರೆ ಬೇರೆ ವೈದ್ಯರನ್ನು ನಿಯೋಜಿಸಲು ಕ್ರಮವಹಿಸಿ. ಕೋವಿಡ್ ಸೇವೆಗೆಂದು ಹೊರಗುತ್ತಿಗೆ ಆಧಾರದ ಮೇಲೆ ಪ್ರತಿ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ತೆಗೆದು ಕೊಳ್ಳಲು ಕ್ರಮವಹಿಸಬೇಕು. ಮಂಡ್ಯದಲ್ಲಿ ಕೋವಿಡ್‍ಗೆಂದು ಒಂದು ಆಸ್ಪತ್ರೆಯನ್ನು ಸಂಪೂರ್ಣ ಮೀಸಲಿರಿಸಿ. ಕೋವಿಡ್ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳನ್ನು ಮೀಸಲಿರಿಸಿ ಎಂದರು.
ಜಿಲ್ಲಾಧಿಕಾರಿ ಎಸ್.ಅಶ್ವಥಿ ಮಾತನಾಡಿ, ಸರ್ಕಾರ 14 ದಿನಗಳ ಲಾಕ್‍ಡೌನ್ ಘೋಷಣೆ ಮಾಡಿದ್ದು, ಈ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗೆ ಹಾಲು, ಹಣ್ಣು, ತರಕಾರಿ ದಿನಸಿ, ಖರೀದಿಗೆ ಬೆಳಗ್ಗೆ 6 ರಿಂದ 10 ಗಂಟೆಗೆ ಅವಕಾಶ ಮಾಡಿಕೊಡಲಾಗಿದೆ. ಇನ್ನುಳಿದ ಸಮಯದಲ್ಲಿ ಯÁವುದೇ ಕಾರಣಕ್ಕೂ ತೆರೆಯಲು ಅವಕಾಶ ಮಾಡಿ ಕೊಡಬೇಡಿ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್‍ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರ ಮಾಡುವ ಸಣ್ಣಪುಟ್ಟ ಅಂಗಡಿಗಳನ್ನು ಮುಚ್ಚಿಸಿ ಎಂದು ನಗರಸಭೆ, ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎಂ.ಶ್ರೀನಿ ವಾಸ್, ಡಾ.ಅನ್ನದಾನಿ, ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇ ಗೌಡ, ಅಪರ ಜಿಲ್ಲಾಧಿಕಾರಿ ಶೈಲಜಾ, ಜಿಪಂ ಸಿಇಓ ಜುಲ್ಪಿಕರ್ ಉಲ್ಲಾ, ಎಸ್ಪಿ ಡಾ.ಅಶ್ವಿನಿ, ಉಪವಿಭಾಗಾಧಿಕಾರಿಗಳಾದ ಐಶ್ವರ್ಯ, ಶಿವಾನಂದಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ ಮತ್ತಿತರರು ಉಪಸ್ಥಿತರಿದ್ದರು.

Translate »