ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಲು ತಾಕೀತು
ಚಾಮರಾಜನಗರ

ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಲು ತಾಕೀತು

September 19, 2018

ಗುಂಡ್ಲುಪೇಟೆ:  ಪ್ರಯಾಣಿಕರಿಗೆ ಮೂಲಸೌಕರ್ಯವನ್ನು ಒದಗಿಸುವಂತೆ ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾ ಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಬಸ್ ನಿಲ್ದಾಣದಲ್ಲಿ ಹರಿಯುತ್ತಿದ್ದ ಕೊಳಚೆ ನೀರನ್ನು ಮತ್ತು ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿ ಪ್ರಯಾಣಿಕರಿಗೆ ಮೂಲಸೌಕರ್ಯವನ್ನು ಒದಗಿಸುವುದು ಇಲಾಖೆಯ ಮೊದಲ ಕರ್ತವ್ಯ. ಇದನ್ನು ಅರಿತು ಕ್ರಮವಹಿಸಿ ಎಂದು ಡಿಪೋ ವ್ಯವಸ್ಥಾಪಕ ಜಿ.ಎಂ.ಜಯಕುಮಾರ್ ಅವರಿಗೆ ತಾಕೀತು ಮಾಡಿದರು.

ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯದ ಬಗ್ಗೆ ಹಲವು ದೂರುಳಿದ್ದು, ಸಮರ್ಪಕವಾಗಿ ಸ್ವಚ್ಛತಾ ಕಾರ್ಯಗಳು ನಡೆಯುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆ ಮತ್ತು ಕಸ ನಿರ್ವಹಣೆ ಸಮರ್ಪಕವಾಗಿಲ್ಲ. ಸಾರಿಗೆ ನಿಲ್ದಾಣ ಒಳಭಾಗ ದಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆಯಿಲ್ಲದೆ ಕೊಳಚೆ ನೀರು ಹರಿಯುತ್ತಿರುವುದು ಸೇರಿದಂತೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಳಚೆ ನೀರು ಬಸ್‍ನಿಲ್ದಾಣದ ದ್ವಾರದಲ್ಲಿಯೇ ಹರಿಯುತ್ತಿರುವುದರಿಂದ ಬಸ್ ನಿಲ್ದಾಣದ ಒಳಗೆ ಪ್ರವೇಶಿಸುವ ಮತ್ತು ಬಸ್‍ಗಾಗಿ ಕಾಯುವ ಪ್ರಯಾಣಿಕರಿಗೆ ತೊಂದ ರೆಯಾಗುತ್ತಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಂಡು ಪ್ರಯಾಣಿಕರಿಗೆ ಮೂಲಸೌಕರ್ಯ ಕಲ್ಪಿಸಿ ಎಂದು ಶಾಸಕ ನಿರಂಜನ ಕುಮಾರ್ ಅಧಿಕಾರಿಗಳಿಗೆ ಒಂದು ವಾರಗಳ ಕಾಲ ಗಡುವು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡಹುಂಡಿ ಜಗದೀಶ್, ಮಂಡಲಾಧ್ಯಕ್ಷ ಎನ್.ಮಲ್ಲೇಶ್, ಮುಖಂಡರಾದ ಗೋವಿಂದಸ್ವಾಮಿ, ಎಸ್.ಸಿ.ಮಂಜುನಾಥ್, ಸತೀಶ್ ಇತರರು ಇದ್ದರು.

Translate »