ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಸೂಚನೆ
ಮೈಸೂರು

ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಸೂಚನೆ

June 21, 2020

ಮೈಸೂರು,ಜೂ.20-ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿ ರುವ ಬಡವರು ಹೊರತುಪಡಿಸಿ ಸರ್ಕಾರಿ/ ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ ವಿಶ್ವವಿದ್ಯಾಲಯ/ ಸಂಸ್ಥೆಯ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬದವರು ಹೊಂದಿರುವುದು ಅಕ್ಷಮ್ಯ ಅಪರಾಧ. ಅಂತÀವರು ತಿಂಗಳೊಳಗಾಗಿ ಬಿಪಿಎಲ್ ಕಾರ್ಡ್ ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂದಿರುಗಿಸಿ ಕಾರ್ಡ್ ಅನ್ನು ರದ್ದುಪಡಿಸಿಕೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

1 ತಿಂಗಳ ನಂತರವೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ/ದೂರುಗಳು ಸ್ವೀಕೃತವಾದರೆ, ಅಂತಹ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗು ವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »