ಮಹದೇಶ್ವರಬೆಟ್ಟ ಅಭಿವೃದ್ಧಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ
ಚಾಮರಾಜನಗರ

ಮಹದೇಶ್ವರಬೆಟ್ಟ ಅಭಿವೃದ್ಧಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ

January 24, 2020

ಚಾಮರಾಜನಗರ, ಜ.23- ಶ್ರೀಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೈಗೊಂಡಿ ರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಮತ್ತು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಸಲಾಗುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಕ್ತಾಧಿಗಳ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿರುವ ವಸತಿ ಗೃಹ ಕಾಮಗಾರಿಗ ಳನ್ನು ವಿಳಂಬ ಮಾಡದೆ ಪೂರ್ಣಗೊಳಿಸಬೇಕು. ಡಾರ್ಮಿಟರಿ, ಇತರೆ ಸಿದ್ಧವಾಗಿರುವ ವಸತಿ ಗೃಹ ಗಳಿಗೆ ಬೇಕಿರುವ ಪರಿಕರಗಳನ್ನು ಅಳವಡಿಸುವ ಪ್ರಕ್ರಿಯೆ ಶೀಘ್ರ ಕೈಗೊಳ್ಳುವಂತೆ ತಿಳಿಸಿದರು.

ಮಹದೇಶ್ವರ ಬೆಟ್ಟದಲ್ಲಿ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಬಗ್ಗೆ ಬಿಎಸ್‍ಎನ್‍ಎಲ್ ಅಧಿಕಾರಿಗಳೊಂ ದಿಗೆ ಚರ್ಚಿಸಿದ ವೇಳೆ ಮತ್ತೊಂದು ಟವರ್ ಅಳವಡಿ ಸುವುದಾಗಿ ಅಧಿಕಾರಿಗಳು ತಿಳಿಸಿದರು. ಈ ಕೆಲಸವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಸಚಿವರು ಸೂಚಿಸಿದರು.

ದೀಪದ ಒಡ್ಡುವಿನಲ್ಲಿ ನಿರ್ಮಾಣ ಮಾಡಲಿ ರುವ ಮಹದೇಶ್ವರರ ಬೃಹತ್ ಪ್ರತಿಮೆ ಕೆಲಸದ ಸಂಪೂರ್ಣ ಮಾಹಿತಿಯನ್ನು ಪವರ್ ಪಾಯಿಂಟ್ ಪ್ರದರ್ಶನದ ಮೂಲಕ ವೀಕ್ಷಿಸಿದ ಸಚಿವರು, ನಿರ್ಮಾಣಕ್ಕಾಗಿ ಅಗತ್ಯ ಸ್ಥಳ ಹಸ್ತಾಂತರ ಪ್ರಕ್ರಿಯೆ ಇತರೆ ಕೆಲಸಗಳನ್ನು ಶೀಘ್ರ ನಿರ್ವಹಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದರು.

ತಾಳಬೆಟ್ಟದಿಂದ ದೇವಾಲಯದವರೆಗೆ ಕಾಲ್ನಡಿಗೆ ಮಾರ್ಗದಲ್ಲಿ ಮೆಟ್ಟಿಲುಗಳನ್ನು ನಿರ್ಮಾಣ ಮಾಡುವ ಕಾಮಗಾರಿ ಕುರಿತು ಪರಿಶೀಲಿಸಿದ ಸಚಿವರು ಈ ಸಂಬಂಧ ತ್ವರಿತ ಕ್ರಮಕ್ಕೆ ಮುಂದಾಗುವಂತೆ ತಿಳಿಸಿ ದರು. ಶಾಸಕ ಆರ್.ನರೇಂದ್ರ ಮಾತನಾಡಿ, ಕ್ಷೇತ್ರಕ್ಕೆ ಬರುವ ಭಕ್ತಾಧಿಗಳ ಸೌಕರ್ಯಕ್ಕೆ ಅಗತ್ಯ ವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಜಾತ್ರಾ ಸಮಯದಲ್ಲಿ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗುವುದರಿಂದ ಯಾವುದೇ ಕೊರತೆಯಾಗ ದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

ತಾಳ ಬೆಟ್ಟದಿಂದ ಮಹದೇಶ್ವರ ಕ್ಷೇತ್ರದವರೆಗೆ ತಲುಪುವ ರಸ್ತೆ ಅಭಿವೃದ್ಧಿ ಕೆಲಸ ತುರ್ತಾಗಿ ಅಗಬೇಕಿದೆ. ಈ ನಿಟ್ಟಿನಲ್ಲಿ ಅಗತ್ಯ ನಿರ್ದೇಶನ ನೀಡ ಬೇಕಿದೆ ಎಂದು ಶಾಸಕ ಆರ್.ನರೇಂದ್ರ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಮಾತನಾಡಿ, ಮೊದಲಿಗೆ ತುರ್ತಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ ತಾತ್ಕಾಲಿಕವಾಗಿ ಹೋಗಿಬರಲು ಅನುಕೂಲ ವಾಗುವಂತೆ ರಸ್ತೆ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು. ಜಾತ್ರಾ ಸಮಯದಲ್ಲಿ ಭಕ್ತಾಧಿಗಳಿಗೆ ಅಗತ್ಯವಿರುವ ಎಲ್ಲಾ ಸೌಕರ್ಯವನ್ನು ಒದಗಿಸುವಂತೆ ಸೂಚಿಸಿದರು.

ಒಳ ಚರಂಡಿ ಕಾಮಗಾರಿ, ವೈದ್ಯಕೀಯ ವ್ಯವಸ್ಥೆ, ಬಂದೊಬಸ್ತ್, ವಾಹನ ನಿಲುಗಡೆ, ಸಿ ಸಿ ಕ್ಯಾಮರಾ ಅಳವಡಿಕೆ, ಅಗ್ನಿಶಾಮಕ ದಳ ನಿಯೋಜನೆ ಸೇರಿದಂತೆ ಜಾತ್ರಾ ಸಿದ್ಧತೆಗಳ ಬಗ್ಗೆ ವಿವರವಾಗಿ ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಪಂ ಸಿಇಓ ಬಿ.ಎಚ್.ನಾರಾಯಣ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್. ಡಿ. ಆನಂದ್ ಕುಮಾರ್, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸುರೇಂದ್ರ ಇತರರಿದ್ದರು.

Translate »