ಮೈಸೂರಲ್ಲಿ ಜನವರಿ 12ರಂದು ಅಂತಾರಾಷ್ಟ್ರೀಯ ಮಟ್ಟದ ಯೋಗ ಪ್ರದರ್ಶನ
ಮೈಸೂರು

ಮೈಸೂರಲ್ಲಿ ಜನವರಿ 12ರಂದು ಅಂತಾರಾಷ್ಟ್ರೀಯ ಮಟ್ಟದ ಯೋಗ ಪ್ರದರ್ಶನ

December 18, 2018

ಮೈಸೂರು: ಮೈಸೂರಿನ ಬ್ರಹ್ಮಶ್ರೀ ನಾರಾಯಣ ಗುರು ಯೋಗ ಮಂದಿರ ಟ್ರಸ್ಟ್‍ನ ಬೆಳ್ಳಿಹಬ್ಬದ ಅಂಗವಾಗಿ ಜ.12ರಂದು ಮೈಸೂರಿನ ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕನ್ವೆನ್ಷನ್ ಹಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಯೋಗಾ ಸನ ಸ್ಪರ್ಧೆ ಆಯೋಜಿಸಿರುವುದಾಗಿ ಟ್ರಸ್ಟ್ ಅಧ್ಯಕ್ಷ ಯೋಗಾಚಾರ್ಯ ಬಿ.ಶಾಂತರಾಮ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ವಿವಿಧ ವಯೋಮಾನದ 7 ವಿಭಾಗಗಳಲ್ಲಿ ಸ್ಪರ್ಧೆ ನಡೆಯ ಲಿದೆ. 55 ವರ್ಷ ಮೇಲ್ಪಟ್ಟವರಿಗೂ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಮಹಿಳೆ ಯರು, ಪುರುಷರೂ ಭಾಗವಹಿಸಬಹುದು. ಸ್ಪರ್ಧೆಯಲ್ಲಿ ತಮಿಳುನಾಡು, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯೋಗ ಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಅಂದು ಸಂಜೆ 4 ಗಂಟೆಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಆಯುಷ್ ಇಲಾಖೆಯ ಡಾ.ಬಿ.ಎಸ್. ಸೀತಾಲಕ್ಷ್ಮಿ, ಭಾರತೀ ಯೋಗಧಾಮದ ಸಂಸ್ಥಾಪಕ ಡಾ.ಲಕ್ಷ್ಮಿನಾರಾಯಣ ಶೆಣೈ, ಮೈಸೂರು ಯೋಗ ಒಕ್ಕೂಟದ ಅಧ್ಯಕ್ಷ ಡಾ.ಬಿ.ಪಿ.ಮೂರ್ತಿ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು. ಜ.13ರಂದು ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಸ್ವಾಮಿ ಮಹೇಶಾತ್ಮನಂದಜೀ ಮಹಾರಾಜ್ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ದುಂಡಯ್ಯ, ಪುರುಷೋತ್ತಮ, ಬಿ.ಪಿ.ಮೂರ್ತಿ ಇನ್ನಿತರರು ಉಪಸ್ಥಿತರಿದ್ದರು.

Translate »