ನ.23ರಂದು ಕೌಟಿಲ್ಯದಲ್ಲಿ ಅಂತರರಾಷ್ಟ್ರೀಯ ಕ್ವಿಜ್
ಮೈಸೂರು

ನ.23ರಂದು ಕೌಟಿಲ್ಯದಲ್ಲಿ ಅಂತರರಾಷ್ಟ್ರೀಯ ಕ್ವಿಜ್

November 18, 2019

ಇಂಡೋ ಜಪಾನಿಸ್ ಸಂಯುಕ್ತಾಶ್ರಯದಲ್ಲಿ ಆಯೋಜನೆ

ಮೈಸೂರು: ಇಂಡೋ ಜಪಾನಿಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಇವರ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಕೌಟಿಲ್ಯ ವಿದ್ಯಾಲಯದಲ್ಲಿ ವಿದ್ಯಾರ್ಥಿ ಗಳಿಗಾಗಿ, ಇದೇ ಪ್ರಥಮ ಬಾರಿಗೆ ಜಪಾನ್ ದೇಶಕ್ಕೆ ಸಂಬಂಧಿಸಿದ ಅಂತಾರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನವೆಂಬರ್ 23ರಂದು ನಗರದ ದಟ್ಟಗಳ್ಳಿ 3ನೇ ಹಂತದಲ್ಲಿರುವ ಶಾಲಾ ಆವರಣದಲ್ಲಿ 6, 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ರಸಪ್ರಶ್ನೆ ಸ್ಪರ್ಧೆ ಹಾಗೂ ಚಿತ್ರ ಕಲಾ ಸ್ಪರ್ಧೆಯನ್ನ ಏರ್ಪಡಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಸ್ಪರ್ಧೆಗೆ ತಮ್ಮ ಹೆಸರನ್ನು ನ.20ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. 6ನೇ ತರಗತಿ ವಿದ್ಯಾರ್ಥಿಗಳಿಗೆ ಮೌಂಟ್ ಫ್ಯೂಜಿ, ಟೋಕಿಯೋ ಸಿಟಿ, ಕ್ಯೋಟೋ ಟೆಂಪಲ್ ವಿಷಯ ಆಧಾರಿತ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್, ಕ್ಯಾಲಿಗ್ರಾಫಿ, ಜಪಾನಿ ದೇಶದ ಆಹಾರ ಮತ್ತು ಸಂಸ್ಕøತಿ ಹಾಗೂ ಮಾರ್ಷಲ್ ಆಟ್ರ್ಸ್ ಸೇರಿದಂತೆ ಜಪಾನ್ ದೇಶಕ್ಕೆ ಸಂಬಂಧಿತ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿ ಗಳು ಮತ್ತು ಶಿಕ್ಷಣ ಸಂಸ್ಥೆಗಳು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 96119 47387 ಕರೆ ಮಾಡುವಂತೆ ಅಥವಾ ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.

Translate »