ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮೈಸೂರು

ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

September 1, 2020

ಮೈಸೂರು, ಆ.31- 2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಪರೀಕ್ಷೆ ಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿ ಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಹಾಗೂ 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೋಮಾ ಮಾಡಿದ ವಿದ್ಯಾರ್ಥಿಗಳಿಗೆ 20,000 ರೂ. ಪ್ರೋತ್ಸಾಹ ಧನ, ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ 25,000 ರೂ, ಸ್ನಾತಕೋತ್ತರ ಪದವಿಗಳಾದ  MA. M.SC, M.COM. MBA. MCA. MFA  ಮುಗಿಸಿದ ವಿದ್ಯಾರ್ಥಿಗಳಿಗೆ 30,000 ಹಾಗೂ agriculture, enginee ring, medicine, veterinary ಮುಗಿಸಿದ ವಿದ್ಯಾರ್ಥಿ ಗಳಿಗೆ 35,000 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿ ಗಳು ಸಮಾಜ ಕಲ್ಯಾಣ ಇಲಾಖೆ ವೆಬ್ ಸೈಟ್ www. sw. kar. nic.in ನಲ್ಲಿ ನ.30ರೊಳಗೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ 4 ದಿನಗಳೊಳಗೆ ಡೌನ್ ಲೋಡ್ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಪಡುವಾರ ಹಳ್ಳಿಯ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿರುವ ಡಾ. ಬಾಬು ಜಗಜೀವನರಾಮ್ ಭವನ ಕಟ್ಟಡಗೆ ಅಥವಾ ಜಿಲ್ಲೆಯ ಆಯಾಯ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾ ಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

Translate »