ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವಿಶ್ವ ಪ್ರಾರ್ಥನಾ ಮಂದಿರದಲ್ಲಿ ಶುಕ್ರವಾರ ನಡೆದ ವೇದ ಪರೀಕ್ಷೆಗಳ ಘಟಿಕೋತ್ಸವದಲ್ಲಿ 354 ಮಂದಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಆಶ್ರಮದ ಕಿರಿಯ ಸ್ವಾಮೀಜಿ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣಪತ್ರ ವಿತರಿಸಿದರು.
ಶ್ರೀ ಅವಧೂತ ದತ್ತಪೀಠ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವೇದ ಪಾಠ ಶಾಲೆಯಲ್ಲಿ ಜೂ.4ರಂದು ನಡೆದ ರಾಷ್ಟ್ರಮಟ್ಟದ 25ನೇ ವೇದ ಪರೀಕ್ಷೆ(ಖುಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ) ಯಲ್ಲಿ 408 ಮಂದಿ ಭಾಗವಹಿಸಿದ್ದು, ಅದರಲ್ಲಿ 122 ಮಂದಿ ಅತ್ಯುನ್ನತ ಶ್ರೇಣ , 165 ಮಂದಿ ಪ್ರಥಮ, 67 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 54 ಮಂದಿ ಅನುತೀರ್ಣರಾಗಿದ್ದಾರೆ.
ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ಬೆಂಗಳೂರು, ಉಡುಪಿ, ಮಂಗಳೂರು, ವಿಜಯವಾಡ ಮತ್ತಿತರೆ ಪ್ರದೇಶಗಳಿಂದ 402 ಮಂದಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಅವರಿಗೆಲ್ಲಾ ಆಶ್ರಮದ ವತಿಯಿಂದ ವಿಶೇಷವಾಗಿ ಊಟ-ವಸತಿ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ಪ್ರಯಾಣ ಭತ್ಯೆಯನ್ನು ನೀಡಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು.