ಡಿ.ಕೆ.ಶಿವಕುಮಾರ್ ವಿರುದ್ಧ ಐಟಿ, ಇಡಿ ದುರ್ಬಳಕೆ: ಬಿಜೆಪಿ ವಿರುದ್ಧ ಹೋರಾಟದ ಎಚ್ಚರಿಕೆ
ಮೈಸೂರು

ಡಿ.ಕೆ.ಶಿವಕುಮಾರ್ ವಿರುದ್ಧ ಐಟಿ, ಇಡಿ ದುರ್ಬಳಕೆ: ಬಿಜೆಪಿ ವಿರುದ್ಧ ಹೋರಾಟದ ಎಚ್ಚರಿಕೆ

September 22, 2018

ಮೈಸೂರು,: ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಐಟಿ ಹಾಗೂ ಇಡಿ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಮೈಸೂರಿನ ಅಜೀಜ್‍ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಮಾಧ್ಯಮ ವಕ್ತಾರ ರಾಜೇಶ್ ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ ಈ ಇಲಾಖೆಗಳ ಮೇಲೆ ಒತ್ತಡ ಹೇರುವ ಮೂಲಕ ಕಾಂಗ್ರೆಸ್‍ನ ಪ್ರಬಲ ನಾಯಕರಾದ ಡಿ.ಕೆ.ಶಿವಕುಮಾರ್ ಅವರನ್ನು ವ್ಯವಸ್ಥಿತವಾಗಿ ಹಣಿಯಲು ಮುಂದಾಗಿದ್ದಾರೆ. ಹಾಗೇನಾದರೂ ಬಿಜೆಪಿ ನಾಯಕರು ತಮ್ಮ ನಡೆ ಬದಲಿಸಿಕೊಳ್ಳದಿದ್ದರೆ ಅವರ ವಿರುದ್ಧ ಕಾಂಗ್ರೆಸ್ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕಾಂಗ್ರೆಸ್ ಮುಖಂಡರಾದ ಮಹಮದ್ ಇರ್ಫಾನ್, ಕೃಷ್ಣಮೂರ್ತಿ, ಕುಮಾರ್, ಕುರುಬಾರಹಳ್ಳಿ ಪ್ರಕಾಶ್, ಚಿಕ್ಕಸ್ವಾಮಿ, ಶ್ರೀನಿವಾಸ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Translate »