ಐಟಿ, ಜಿಎಸ್‍ಟಿ ರಿಟರ್ನ್ ಸಲ್ಲಿಕೆ ಗಡುವು ಜನವರಿ 10ರವರೆಗೆ ವಿಸ್ತರಣೆ
ಮೈಸೂರು

ಐಟಿ, ಜಿಎಸ್‍ಟಿ ರಿಟರ್ನ್ ಸಲ್ಲಿಕೆ ಗಡುವು ಜನವರಿ 10ರವರೆಗೆ ವಿಸ್ತರಣೆ

December 31, 2020

ನವದೆಹಲಿ: ಆರ್ಥಿಕ ವರ್ಷ 2019-20 ಅಥವಾ ಅಸೆಸ್‍ಮೆಂಟ್ ವರ್ಷ 2020-21ಕ್ಕೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಮತ್ತು ಜಿಎಸ್‍ಟಿ ರಿಟರ್ನ್ ಸಲ್ಲಿಕೆ ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ. ಕೊರೊನಾ ಪರಿಸ್ಥಿತಿಯನ್ನು ಮನಗಂಡು ಐಟಿಆರ್ ಸಲ್ಲಿಕೆ ಅವಧಿಯನ್ನು ಈ ಹಿಂದೆ ಡಿ.31ರವರೆಗೆ ವಿಸ್ತರಿಸಲಾಗಿತ್ತು. ಈಗ ಮತ್ತೆ ಜ.10ರವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ. ಇನ್ನು ಜಿಎಸ್‍ಟಿ ವಾರ್ಷಿಕ ರಿಟರ್ನ್ ಸಲ್ಲಿಕೆಯ ಅವಧಿಯನ್ನೂ ಫೆಬ್ರವರಿ 28, 2021ರವ ರೆಗೆ ವಿಸ್ತರಿಸಲಾಗಿದೆ. ಕೋವಿಡ್-19 ಕಾರಣದಿಂದ ತೆರಿಗೆದಾರರು ಎದುರಿಸುತ್ತಿರುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಐಟಿ ರಿಟರ್ನ್ ಸಲ್ಲಿಕೆ ಕೊನೆಯ ದಿನಾಂಕಗಳನ್ನು ವಿಸ್ತರಿಸುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ.

 

 

Translate »