ಹೈದರಾಬಾದ್ ಪೆÇಲೀಸರ ಕ್ರಮವನ್ನು ಟೀಕಿಸುವುದು ಸರಿಯಲ್ಲ
ಮೈಸೂರು

ಹೈದರಾಬಾದ್ ಪೆÇಲೀಸರ ಕ್ರಮವನ್ನು ಟೀಕಿಸುವುದು ಸರಿಯಲ್ಲ

December 8, 2019

ಮೈಸೂರು,ಡಿ.7-ಪಶುವೈದ್ಯೆ ಅತ್ಯಾಚಾರಿಗಳ ಎನ್‍ಕೌಂಟರ್ ಪ್ರಕರಣದ ವಿಚಾರ ವಾಗಿ ಪ್ರತಿಕ್ರಿಯಿಸಿರುವ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಹೈದರಾಬಾದ್ ಪೆÇಲೀಸರ ಕ್ರಮವನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

ಮಾಧ್ಯಮಗಳಿಗೆ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಯದುವೀರ್, ಇಂತಹ ಘಟನೆಗಳು ಯಾರಿಗೂ ಸಂತೋಷ ತರೋಲ್ಲ, ಆದ್ರೆ ಸಮಾಧಾನ ತಂದಿದೆ. ಹೈದರಾಬಾದ್ ಪೆÇಲೀಸರು ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ನಡೆದುಕೊಂಡಿದ್ದಾರೆ. ಪ್ರಕರಣ ಮರುಸೃಷ್ಟಿ ವೇಳೆ ಈ ಘಟನೆ ನಡೆದಿದೆ. ಹಾಗಾಗಿ ಆ ಸಂದರ್ಭದಲ್ಲಿ ಎನ್‍ಕೌಂಟರ್ ಮಾಡಿದ್ದಾರೆ. ನಮ್ಮೆಲ್ಲರಿಗೂ ಕಾನೂನಿನ ಮೂಲಕವೇ ಎಲ್ಲವೂ ಬಗೆಹರಿಯಬೇಕು ಎಂಬ ಆಸೆ ಇದೆ. ಈಗ ಆಗಿರುವುದು ಕಾನೂನು ಪ್ರಕಾರ ಆಗಿದ್ದರೆ ಅದು ತಪ್ಪಲ್ಲ. ರಾಜರ ಕಾಲಕ್ಕೂ ಇಂದಿನ ಕಾಲಕ್ಕೂ ವ್ಯತ್ಯಾಸ ಇದೆ. ಕಾನೂನು ಬದಲಾವಣೆಗಿಂತ ತ್ವರಿತವಾಗಿ ಕಾನೂನಿನ ಮೂಲಕ ಶಿಕ್ಷೆಯಾಗಲಿ ಅನ್ನೋದೆ ನಮ್ಮ ಆಶಯ ಎಂದು ಅಭಿಪ್ರಾಯಪಟ್ಟಿದ್ದಾರೆ.

Translate »