ಮೈಸೂರು,ಡಿ.31(ಎಂಕೆ)-ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರೆ ಮಾತ್ರ ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಹೇಳಿದರು.
ಮೈಸೂರಿನ ಬೋಗಾದಿ ರಸ್ತೆಯ ಗಣ ಗರಹುಂಡಿಯಲ್ಲಿರುವ ನಂಜುಂಡೇಶ್ವರ ವಿದ್ಯಾಕೇಂದ್ರದ 9ನೇ ವರ್ಷದ ವಾರ್ಷಿ ಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ಓದಿನಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಹಾಗೆಯೇ ಪಠ್ಯೇತರ ಚಟುವಟಿಕೆಗಳಿಗೂ ಗಮನ ನೀಡಬೇಕು ಎಂದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಅವರು ತಮ್ಮ ಮಕ್ಕಳನ್ನು ಹೇಗೆ ಬೆಳೆಸುತ್ತಾರೆ ಎಂಬುದು ಬಹಳ ಮುಖ್ಯವಾಗಿರುತ್ತದೆ. ಈ ಶಾಲೆಯಲ್ಲಿ ಹೆಚ್ಚಾಗಿ ಚಿಕ್ಕ ಮಕ್ಕಳೇ ಇರು ವುದರಿಂದ ಹೆಚ್ಚಿನ ಕಾಳಜಿಯಿಂದ ನೋಡಿ ಕೊಳ್ಳಬೇಕಾಗುತ್ತದೆ. ಹಿಂದಿನ ಕಾಲದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಇರಲಿಲ್ಲ. ಆದರೆ, ಇಂದು ಕಡ್ಡಾಯ ಶಿಕ್ಷಣ ಜಾರಿಗೊಳಿಸಿ ಶಿಕ್ಷಣಕ್ಕೆ ಮಹತ್ವ ನೀಡಲಾಗುತ್ತಿದೆ.
ಶಿಕ್ಷಣ ಇಲ್ಲದಿದ್ದರೆ ಮಕ್ಕಳಿಗೆ ಜೀವ ನವೇ ಇಲ್ಲ. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಕೊಳ್ಳಬೇಕು. ವಿದ್ಯಾರ್ಥಿಗಳು ದೊಡ್ಡ ಗುರಿ ಇಟ್ಟುಕೊಂಡು ಕಷ್ಟಪಟ್ಟು ಓದಿದರೆ ಮಾತ್ರ ಏನನ್ನಾದರೂ ಸಾಧಿಸಬಹುದು. ಹಾಗೆಯೇ ನೂರಕ್ಕೆ ನೂರು ಅಂಕ ಗಳಿಸಬಹುದು ಎಂದರು.
ಶಾಲೆಯ ಮುಖ್ಯಸ್ಥ ಸ್ವಾಮಿಗೌಡ ಮೂಲತಃ ರಿಯಲ್ ಎಸ್ಟೇಟ್ ಉದ್ಯಮಿ ಯಾಗಿದ್ದರು. ಆದರೆ, ಶಾಲೆಯನ್ನು ಕಟ್ಟಬೇಕು ಎಂಬ ಆಸೆಯನ್ನು ಹೊಂದಿದ್ದ ಅವರು, ನಂಜುಂಡೇಶ್ವರ ಶಾಲೆಯನ್ನು ಕಟ್ಟಿ ಬೆಳೆಸುತ್ತಿದ್ದಾರೆ. ಈ ಭಾಗದ ನೂರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡು ತ್ತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಸಂಸ್ಥೆ ಯಾಗಿ ಬೆಳೆಯಲಿ ಎಂದು ಹಾರೈಸಿದರು.
ಮಾಜಿ ನಗರಪಾಲಿಕೆ ಮಾಜಿ ಸದಸ್ಯ ಶಿವಣ್ಣ, ಶಾಲೆಯ ಮುಖ್ಯಸ್ಥ ಸ್ವಾಮಿ ಗೌಡ, ಶಿವರಾಜ್ ಉಪಸ್ಥಿತರಿದ್ದರು.