ಕೆಆರ್‍ಎಸ್ ಖಾಸಗಿ ಹೋಟೆಲ್ ಮೇಲೆ ಐಟಿ ರೇಡ್

ಮಂಡ್ಯ: ಅಕ್ರಮ ಹಣ ಸಂಗ್ರಹ, ಚುನಾವಣೆಗಾಗಿ ಹಣ ಹಂಚಿಕೆಗೆ ಸಿದ್ಧತೆ ಮಾಡಿಕೊಂಡಿ ದ್ದಾರೆ ಎಂಬ ಸಂಶಯದ ಮೇರೆಗೆ ನಿನ್ನೆಯಷ್ಟೇ ಮಂಡ್ಯದಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅವರ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳ ತಂಡ ಇಂದೂ ಕೂಡ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್‍ನ ಬೃಂದಾವನದಲ್ಲಿರುವ ಖಾಸಗಿ ಹೋಟೆಲ್ ಮೇಲೆ ಐಟಿ ದಾಳಿ ನಡೆಸಿದೆ.

ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಕೆಆರ್‍ಎಸ್‍ಗೆ ಆಗಮಿಸಿದ ಸುಮಾರು 20ಕ್ಕೂ ಹೆಚ್ಚು ಐಟಿ ಅಧಿ ಕಾರಿಗಳ ತಂಡ ಅರ್ಧ ಗಂಟೆ ಕಾಲ ಹೋಟೆಲ್ ಕೊಠಡಿಯನ್ನು ಪರಿಶೀಲನೆ ನಡೆಸಿತು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕ್ಷೇತ್ರಕ್ಕೆ ಆಗಮಿಸುವ ಹಲವು ಗಣ್ಯ ನಾಯ ಕರು ಇದೇ ಹೋಟೆಲಿನಲ್ಲಿ ವಾಸ್ತವ್ಯ ಹೂಡುತ್ತಿದ್ದರು.

ಇತ್ತೀಚೆಗೆ ಸಿಎಂ ಕುಮಾರಸ್ವಾಮಿ ಜಿಲ್ಲೆಯ ಶಾಸಕರು, ಜನಪ್ರತಿನಿಧಿ ಗಳ ಸಭೆಯನ್ನು ಇಲ್ಲೇ ನಡೆಸಿದ್ದರು. ನಿನ್ನೆ ರಾತ್ರಿ ಕೂಡ ಮೈತ್ರಿ ಅಭ್ಯರ್ಥಿ ನಿಖಿಲ್ ಅವರು ಇದೇ ಹೋಟೆಲಿನಲ್ಲಿ ತಂಗಿದ್ದರು. ಇದೇ ಹಿನ್ನೆಲೆಯಲ್ಲಿ ಐಟಿ ರೇಡ್ ಆಗಿರುವ ಶಂಕೆ ವ್ಯಕ್ತವಾಗಿದೆ. ದಾಳಿಯ ವೇಳೆ ಸಿಎಂ ತಂಗಿದ್ದ ಕೊಠಡಿಗಳ ತಪಾಸಣೆಯ ಜೊತೆಗೆ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿ ವಶಕ್ಕೆ ತೆಗೆÉದುಕೊಂಡಿರುವ ಐಟಿ ಅಧಿಕಾರಿಗಳು ಹೋಟೆಲ್‍ನ ಸಿಬ್ಬಂದಿಯಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಕೆ.ಆರ್.ಪೇಟೆ ವರದಿ: ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಅವರ ಸಹೋದರಿ ಪುತ್ರ, ಪಟ್ಟಣದ ಉದ್ಯಮಿ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಕೆ.ಟಿ.ಚಕ್ರಪಾಣಿ ಅವರ ಮನೆ, ಕಚೇರಿಗೆ ಹಾಗೂ ತೋಟದ ಮನೆಗಳ ಮೇಲೆ ಜಿಲ್ಲಾ ಆದಾಯ ತೆರಿಗೆ ಅಧಿಕಾರಿ ಗಳ ತಂಡ ಏಕ ಕಾಲಕ್ಕೆ ದಾಳಿ ನಡೆಸಿ ಅವರ ಉದ್ಯಮ ವ್ಯವಹಾರಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ತಪಾಸಣೆ ನಡೆಸಿದ್ದಾರೆ. ತಲಾ ಐವರಿದ್ದ ಜಿಲ್ಲಾ ಆದಾಯ ತೆರಿಗೆ ಅಧಿಕಾರಿಗಳ ಮೂರು ತಂಡವು ಏಕಕಾಲಕ್ಕೆ ಪಟ್ಟಣದ ಹೇಮಗಿರಿ ರಸ್ತೆಯಲ್ಲಿರುವ ನಿವಾಸ, ಕುಪ್ಪಹಳ್ಳಿ ಬಳಿ ಇರುವ ತೋಟದ ಮನೆ, ಹಾಗೂ ಪಟ್ಟಣದ ಕೆಬಿಸಿ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿಯ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.