ಹಿಂಸೆಗೆ ಪ್ರಚೋದಿಸುವುದು ದುರದೃಷ್ಟಕರ: ಐಟಿ ತಿರುಗೇಟು
ಮೈಸೂರು

ಹಿಂಸೆಗೆ ಪ್ರಚೋದಿಸುವುದು ದುರದೃಷ್ಟಕರ: ಐಟಿ ತಿರುಗೇಟು

March 29, 2019

ಬೆಂಗಳೂರು:ನಾವು ಯಾವುದೇ ಶಾಸಕ ಅಥವಾ ಸಂಸದರನ್ನು ಗುರಿಯಾಗಿಸಿ ಕೊಂಡು ದಾಳಿ ನಡೆಸಿಲ್ಲ, ಕಾನೂನು ಅಡಿಯಲ್ಲಿ ದಾಳಿ ಮಾಡಿದ್ದೇವೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ದಾಳಿ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಐಟಿ ಇಲಾಖೆ, ಜವಾಬ್ದಾರಿಯುತ ಹುದ್ದೆಯಲ್ಲಿರುವವರು ಹಿಂಸೆಗೆ ಪ್ರಚೋದಿಸುವಂತಹ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ತಿರುಗೇಟು ನೀಡಿದೆ. ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ನಡೆದಿದೆ ಎಂಬ ಜೆಡಿಎಸ್, ಕಾಂಗ್ರೆಸ್ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಆದಾಯ ತೆರಿಗೆ ಇಲಾಖೆ, ವಿಶ್ವಾಸಾರ್ಹ ಮೂಲಗಳ ಆಧಾರದ ಮೇಲೆ ದಾಳಿ ನಡೆಸಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ನಡೆಯುವ ಈ ಪ್ರಕ್ರಿಯೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

Translate »