ಶಾರೂಖ್ ಪುತ್ರನಿಗೆ ಜೈಲೇ ಗತಿ
News

ಶಾರೂಖ್ ಪುತ್ರನಿಗೆ ಜೈಲೇ ಗತಿ

October 21, 2021

ಮುಂಬೈ: ಮುಂಬೈನ ಐಷಾರಾಮಿ ಹಡಗೊಂದರಲ್ಲಿನ ಡ್ರಗ್ ಪಾರ್ಟಿ ಸಂಬಂಧ ಬಂಧಿತನಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್‍ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದ್ದು ಆರ್ಯನ್‍ಗೆ ಇನ್ನು ಕೆಲ ದಿನ ಜೈಲೇ ಗತಿ. ಅ.3ರಂದು ಎನ್‍ಸಿಬಿಯಿಂದ ಬಂಧಿತ ನಾಗಿದ್ದ ಆರ್ಯನ್ ಖಾನ್ ಸದ್ಯ ಮುಂಬೈನ ಅರ್ಥರ್ ಜೈಲಿನಲ್ಲಿ ನ್ಯಾಯಾಂಗ ಬಂಧನ ದಲ್ಲಿದ್ದಾನೆ. ಆರ್ಯನ್ ಖಾನ್‍ಗೆ ಜಾಮೀನು ನೀಡುವಂತೆ ಮುಂಬೈನ ಎನ್‍ಡಿಪಿಎಸ್ ವಿಶೇಷ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಸೇರಿದಂತೆ ಇನ್ನು ಮೂವರಿಗೆ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಈ ಪ್ರಕರಣದ ಆರೋಪಿ ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

ಹೈ ಕೋರ್ಟ್ ಮೊರೆ: ಎನ್‍ಡಿಪಿಎಸ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿ ಸುತ್ತಿದ್ದಂತೆ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಅವರ ಆರ್ಯನ್ ಖಾನ್ ಪರ ವಕೀಲರು ಹೈಕೋರ್ಟ್‍ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲೇ ವಿಚಾರಣೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

Translate »