ಮೈಸೂರು: ರಾಯ ಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸ ಬೇಕು ಎಂದು ಆಗ್ರಹಿಸಿ ಮೈಸೂರು ಜಿಲ್ಲಾ ವಿಶ್ವಕರ್ಮ ಮಹಾ ಒಕ್ಕೂಟ ಮತ್ತು ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆ ಆಶ್ರಯದಲ್ಲಿ ಸೋಮವಾರ ಮೈಸೂರಿನಲ್ಲಿ ಜಾಥಾ ನಡೆಸಲಾಯಿತು.
ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾಯಿಸಿದ ಒಕ್ಕೂಟದ ನೂರಾರು ಕಾರ್ಯಕರ್ತರು ಮಧು ಪತ್ತಾರ್ ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾ ಗಿದ್ದು, ಧ್ವನಿ ಇಲ್ಲದ ಸಮಾಜದ ಪ್ರಕರಣ ಎಂದು ಈ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆದಿದೆ. ಇದರಲ್ಲಿ ಪೊಲೀಸ್ ಇಲಾಖೆಯ ಓರ್ವ ಸಿಬ್ಬಂದಿಯೂ ಶಾಮೀ ಲಾಗಿದ್ದಾರೆ ಎಂದು ಆರೋಪಿಸಿದರು.
ನ್ಯಾಯಾಲಯದ ಆವರಣದಿಂದ ಜಿಲ್ಲಾ ಧಿಕಾರಿ ಕಚೇರಿವರೆಗೆ ಜಾಥಾ ತೆರಳಿ, ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಪ್ರಕರಣವನ್ನು ಸಿಐಡಿ ತನಿ ಖೆಗೆ ಒಳಪಡಿಸುವುದರಿಂದ ನ್ಯಾಯದ ನಿರೀಕ್ಷೆ ಇಲ್ಲ. ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಈ ಪ್ರಕರಣವನ್ನು ಸಿಬಿ ಐಗೆ ವಹಿಸಬೇಕು. ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತ್ವರಿತ ವಿಚಾರಣೆ ನಡೆಸಿ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ತುಮಕೂರಿನ ನೀಲಕಂಠ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಹುಚ್ಚಪ್ಪ ಚಾರ್, ವಿಶ್ವಕರ್ಮ ಯುವ ಜಾಗೃತಿ ವೇದಿಕೆ ಅಧ್ಯಕ್ಷ ಕೆಂಡಗಣ್ಣ, ಅಮರಶಿಲ್ಪಿ ವೇದಿಕೆ ಅಧ್ಯಕ್ಷ ಎಸ್.ನಾಗಾಚಾರಿ, ಉಪಾ ಧ್ಯಕ್ಷ ಎಂ.ಮಂಜು, ಸಮಾಜದ ಯುವ ಮುಖಂಡರಾದ ರಿಷಿ, ಎನ್.ನಂದಕುಮಾರ್, ಮೊಗಣ್ಣಾಚಾರ್, ಮಹಿಳಾ ಅಧ್ಯಕ್ಷೆ ಶಾಂತಮ್ಮ, ಮೀನಾಕ್ಷಿ, ಪುಟ್ಟಸ್ವಾಮಾ ಚಾರ್ ಇನ್ನಿತರರು ಉಪಸ್ಥಿತರಿದ್ದರು.