ಜೆಡಿಎಸ್-ಕಾಂಗ್ರೆಸ್ ಮೈತ್ರಿ ನಗಣ್ಯ ಮತ್ತೆ ಮೋದಿ ಪ್ರಧಾನಿ: ಈಶ್ವರಪ್ಪ ವಿಶ್ವಾಸ
ಮೈಸೂರು

ಜೆಡಿಎಸ್-ಕಾಂಗ್ರೆಸ್ ಮೈತ್ರಿ ನಗಣ್ಯ ಮತ್ತೆ ಮೋದಿ ಪ್ರಧಾನಿ: ಈಶ್ವರಪ್ಪ ವಿಶ್ವಾಸ

March 13, 2019

ಮೈಸೂರು: ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶವೇ ಒಂದಾಗಿರುವಾಗ ಜೆಡಿಎಸ್, ಕಾಂಗ್ರೆಸ್‍ನಂತಹ ಚಿಲ್ಲರೆ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ನಗಣ್ಯ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲು ಮಂಗಳವಾರ ಮೈಸೂರಿಗೆ ಆಗಮಿಸಿದ್ದ ಕೆ.ಎಸ್.ಈಶ್ವರಪ್ಪ ಖಾಸಗಿ ಹೋಟೆಲ್‍ವೊಂದರಲ್ಲಿ ಪತ್ರಕರ್ತರೊಂದಿಗೆ ಮಾತ ನಾಡಿ, ಕಳೆದ ಐದು ವರ್ಷಗಳಿಂದ ದೇಶದ ಪ್ರಧಾನಿಯಾಗಿ ಉತ್ತಮ ಆಡಳಿತ ನಡೆಸಿರುವ ನರೇಂದ್ರ ಮೋದಿ ಅವರು ದೇಶದ ಪ್ರಗತಿಗೆ ನೀಡಿರುವ ಆದ್ಯತೆಯನ್ನು ಮನಗಂಡು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡು ವುದಕ್ಕೆ ದೇಶವೇ ಒಂದಾಗಿದೆ. ಯುವಕ-ಯುವತಿ ಯರು ಮೋದಿ ಮೋದಿ ಎಂದು ಹುಚ್ಚೆದ್ದು ಕುಣಿ ಯುವ ವಾತಾವರಣ ನಿರ್ಮಾಣವಾಗಿದೆ. ಹಲವು ದೇಶಗಳು ಮೋದಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿವೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾ ಟಕದಲ್ಲಿ ಲೋಕಸಭಾ ಚುನಾವಣೆ ಎದುರಿಸಲು ಚಿಲ್ಲರೆ ಪಕ್ಷಗಳು ಮಾಡಿಕೊಂಡಿರುವ ಮೈತ್ರಿಯಿಂದ ಬಿಜೆಪಿ ಗೆಲುವಿನ ಓಟಕ್ಕೆ ಅಡ್ಡಿಯಾಗುವುದಿಲ್ಲ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 20ರಿಂದ 25 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿಯೊಂದಿಗೆ ಚುನಾವಣಾ ತಯಾರಿ ಮಾಡಿಕೊಂಡಿದ್ದೇವೆ. ಆದರೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮರ್ಥ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುತ್ತೇವೆ ಎಂದರು.

ಬಿಜೆಪಿಗೆ ಲಾಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡರ ಕುಟುಂಬದಿಂದ ಹೆಚ್ಚು ಮಂದಿ ಚುನಾವಣಾ ಕಣಕ್ಕಿಳಿದರೂ ಅದು ಬಿಜೆಪಿಗೆ ವರದಾನವಾಗಲಿದೆ. ಹೆಚ್.ಡಿ.ದೇವೇಗೌಡರಿಗೆ 28 ಮಕ್ಕಳಿದ್ದರೆ ಎಲ್ಲರನ್ನು ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ನ್ನಾಗಿ ಮಾಡುತ್ತಿದ್ದರು. ಅಕಸ್ಮಾತ್ 14 ಗಂಡು ಮಕ್ಕಳಿ ದ್ದರೆ, 14 ಸೊಸೆಯರು ಸೇರಿದಂತೆ 28 ಕ್ಷೇತ್ರಗಳಲ್ಲಿ ಕಣಕ್ಕಿಳಿಸುತ್ತಿದ್ದರು ಎಂದು ಲೇವಡಿ ಮಾಡಿದರು.

ದೇವೇಗೌಡರ ಕುಟುಂಬ ರಾಜಕಾರಣದಿಂದ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು, ಮುಖಂ ಡರು ಬೇಸತ್ತಿದ್ದಾರೆ. ಜನತೆ ಕೂಡ ಬೇಸರಗೊಂಡಿ ದ್ದಾರೆ. ಇದು ಬಿಜೆಪಿಗೆ ವರದಾನವಾಗುತ್ತಿದೆ. ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಜೆಡಿಎಸ್ ಕಾರ್ಯ ಕರ್ತರು ಪಕ್ಷದ ವರಿಷ್ಠರ ವಿರುದ್ಧ ಹರಿಹಾಯುತ್ತಿದ್ದಾರೆ. ಜೆಡಿಎಸ್‍ನಲ್ಲಿ ದೇವೇಗೌಡರ ಕುಟುಂಬದವರನ್ನು ಬಿಟ್ಟರೆ ಬೇರೆ ಯಾರೂ ಇಲ್ಲವೇ ಎಂದು ಜೆಡಿಎಸ್ ಕಾರ್ಯ ಕರ್ತರು ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ಜೆಡಿಎಸ್ ಕಾರ್ಯ ಕರ್ತರೂ ಬಿಜೆಪಿಗೆ ಜೈಕಾರ ಹಾಕುತ್ತಿದ್ದಾರೆ ಎಂದರು.

ರಾಜ್ಯದ ಸಮ್ಮಿಶ್ರ ಸರ್ಕಾರದ ಸಾಧನೆ ಶೂನ್ಯ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ತಮ್ಮ ಕುರ್ಚಿ ಉಳಿಸಿ ಕೊಳ್ಳುವುದಕ್ಕೆ ಹರಸಾಹಸ ಮಾಡುತ್ತಿದ್ದಾರೆ. ಇದೇ ಅವರ ಸಾಧನೆಯಾಗಿದೆ. ಸಮ್ಮಿಶ್ರ ಸರ್ಕಾರದ ನಡೆಯಿಂದ ಬೇಸತ್ತಿರುವ ಜನತೆ ಲೋಕಸಭಾ ಚುನಾ ವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ. ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಂದಾಣಿಕೆ ಮೂಡುವುದಿಲ್ಲ. ಅಭ್ಯರ್ಥಿಗಳ ಗೆಲುವಿಗೆ ಮೈತ್ರಿ ಕಾರ್ಯ ಕರ್ತರು ಶ್ರಮಿಸುವುದಿಲ್ಲ. ಇದು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಯಂ ಘೋಷಿತ ಹಿಂದುಳಿದ ವರ್ಗಗಳ ನಾಯಕರಾಗಿ ದ್ದಾರೆ. ಈ ಹಿಂದೆ ನಾನೇ ಮತ್ತೊಮ್ಮೆ ಮುಖ್ಯಮಂತ್ರಿ ಯಾಗುತ್ತೇನೆ ಎಂದಿದ್ದರು. ಈಗ ಏನಾಯಿತು? ಅವರು ಹೇಳುವುದೆಲ್ಲಾ ನಿಜವಾಗುವುದಿಲ್ಲ. ಅವರ ಗುಣವನ್ನು ಅರಿತು ಚಾಮುಂಡೇಶ್ವರಿ ಕ್ಷೇತ್ರದ ಜನತೆ ಸೋಲಿಸಿದ್ದಾರೆ. ಬಾದಾಮಿ ಜನತೆ ಇವರ ಬಗ್ಗೆ ತಿಳಿಯದೆ ಗೆಲ್ಲಿಸಿದ್ದಾರೆ. ಈಗಲೂ ನಾನು ಅವರಿಗೆ ಸವಾಲು ಹಾಕುತ್ತೇನೆ. ನೀವು ನಿಜವಾದ ಹಿಂದುಳಿದ ವರ್ಗದ ನಾಯಕರೇ ಆಗಿದ್ದಾರೆ ಬಾದಾಮಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇಬ್ಬರೂ ಮತ್ತೆ ಚುನಾವಣೆ ಎದುರಿಸೋಣ. ಅವರು ಮತ್ತೊಮ್ಮೆ ಆಯ್ಕೆಯಾದರೆ ನಾನು ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತೇನೆ. ನಾನು ಸೋತರೆ ರಾಜಕೀಯದಿಂದ ದೂರ ಉಳಿಯುತ್ತೇನೆ ಎಂದರು.

ಸಭೆ: ಬಳಿಕ ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ಪಕ್ಷದ ಕಾರ್ಯತಂತ್ರ ಕುರಿತಂತೆ ಆಯ್ದ ಕೆಲವು ಮುಖಂಡರೊಂದಿಗೆ ಗೌಪ್ಯ ಸಭೆ ನಡೆಸಿ ದರು. ಸುಮಾರು ಒಂದು ಗಂಟೆ ನಡೆದ ಸಭೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯನ್ನು ಸಮರ್ಥವಾಗಿ ಎದುರಿಸುವುದು, ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುವುದು. ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿ ವ್ಯತಿರಿಕ್ತವಾಗದಂತೆ ನೋಡಿ ಕೊಳ್ಳುವುದೂ ಸೇರಿದಂತೆ ಇನ್ನಿತರ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾ ವಳಿ, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್, ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ಸಂಸದ ಪ್ರತಾಪಸಿಂಹ, ಶಾಸಕ ಎಲ್.ನಾಗೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »