ಕೆ.ಆರ್.ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪರ ಕೈ-ದಳ ಜಂಟಿ ಪ್ರಚಾರ
ಮೈಸೂರು

ಕೆ.ಆರ್.ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪರ ಕೈ-ದಳ ಜಂಟಿ ಪ್ರಚಾರ

April 4, 2019

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಬುಧವಾರ ಕೆ.ಆರ್.ವಿಧಾನಸಭಾ ಕ್ಷೇತ್ರದ ಗುಂಡೂರಾವ್ ನಗರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರವಾಗಿ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರು ಜಂಟಿಯಾಗಿ ಪಾದಯಾತ್ರೆ ನಡೆಸಿ ಮತಯಾಚಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮುಖಂ ಡರು ಹಾಗೂ ಕಾರ್ಯಕರ್ತರ ನಡುವೆ ಒಮ್ಮತ ಮೂಡುತ್ತಿಲ್ಲ. ಕ್ಷೇತ್ರದಲ್ಲಿ ಮೈತ್ರಿ ಧರ್ಮ ಪಾಲಿಸಲು ಜೆಡಿಎಸ್ ಕಾರ್ಯ ಕರ್ತರು ಮುಂದಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಳಿಕ ಮೈಸೂರಿನ ಕೆ.ಆರ್. ವಿಧಾನಸಭಾ ಕ್ಷೇತ್ರದಲ್ಲಿ ಕಳೆದು ಮೂರ್ನಾಲ್ಕು ದಿನಗಳಿಂದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಒಂದುಗೂಡಿ ಪ್ರಚಾರ ನಡೆಸಲಾರಂಭಿಸಿದ್ದಾರೆ. ಇಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವ ದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯ ಶಂಕರ್ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಗುಂಡೂರಾವ್ ನಗರದ ವಿವಿಧ ರಸ್ತೆ ಗಳಲ್ಲಿ ಮನೆ ಮನೆಗೆ ತೆರಳಿ ಮತ ಯಾಚಿಸಿದ ವೇಳೆ ಎಂ.ಕೆ.ಸೋಮಶೇಖರ್ ಮಾತ ನಾಡಿ, ಐದು ವರ್ಷಗಳಿಂದ ದೇಶದ ಅಭಿ ವೃದ್ಧಿ ಕುಂಠಿತವಾಗಿದೆ. ಜನರು ಭ್ರಮ ನಿರಸನರಾಗಿದ್ದಾರೆ. ಬಿಜೆಪಿ ನೀಡಿದ ಹುಸಿ ಭರವಸೆಯನ್ನು ನಂಬಿ ಕಳೆದ ಬಾರಿ ಬಿಜೆಪಿಗೆ ಮತ ನೀಡಿದ್ದ ಜನರೇ ಇಂದು ಬಿಜೆಪಿ ಯನ್ನು ಶಪಿಸುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿ ಕಡೆಗಣಿಸಿದೆ. ಅಧಿಕಾರಾ ವಧಿಯಲ್ಲಿ ದಿನಕ್ಕೊಂದು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಾ ಬಂದಿದ್ದಾರೆ ಎಂದು ಟೀಕಿಸಿದರು. ಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯವನ್ನು ಜನರ ಮುಂದಿಟ್ಟು ಮತ ಕೇಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಕಾರಣ ಅಧಿಕಾರಾವಧಿಯಲ್ಲಿ ಒಂದೇ ಒಂದು ಹೊಸ ಯೋಜನೆಯನ್ನು ಅನುಷ್ಠಾನಗೊಳಿ ಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಕೊಂಡು ಜನರಿಗೆ ಮಂಕು ಬೂದಿ ಎರಚು ತ್ತಿದ್ದಾರೆ. ಇತ್ತೀಚೆಗೆ ಭಾರತೀಯ ಯೋಧರ ಮೇಲೆ ನಡೆದ ಭಯೋತ್ಪಾದಕರ ದಾಳಿ, ಸರ್ಜಿಕಲ್ ಸ್ಟ್ರೈಕ್ ಅನ್ನು ಮುಂದಿಟ್ಟು ಕೊಂಡು ರಾಜಕೀಯ ಲಾಭ ಮಾಡಿ ಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಛೇಡಿಸಿದರು. ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರ ಸರಳ ಹಾಗೂ ಸಜ್ಜನಿಕೆ ವ್ಯಕ್ತಿತ್ವಕ್ಕೆ ಕ್ಷೇತ್ರದ ಮತದಾರರು ಮನ್ನಣೆ ನೀಡಲು ಉತ್ಸುಕರಾಗಿದ್ದಾರೆ ಎಂದು ಹೇಳಿದರು.

ಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಮಾತನಾಡಿ, ಮೈಸೂರು-ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಗೆಲು ವಿಗೆ ಎರಡೂ ಪಕ್ಷಗಳ ಕಾರ್ಯಕರ್ತರು ಸಮನ್ವಯತೆ ಕಾಯ್ದುಕೊಂಡು ಪ್ರಚಾರ ನಡೆಸುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾ ಭಿಪ್ರಾಯವಿಲ್ಲ. ಎರಡೂ ಪಕ್ಷಗಳ ಹಿರಿಯ ಮುಖಂಡರ ಸೂಚನೆ ಮೇರೆಗೆ ಮೈತ್ರಿ ಧರ್ಮ ಪಾಲನೆಗೆ ಪಕ್ಷದ ಕಾರ್ಯಕರ್ತರು ಸಮ್ಮತಿಸಿ ಅಭ್ಯರ್ಥಿ ಗೆಲುವಿಗೆ ಪಣತೊಟ್ಟಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಜೆ.ಗೋಪಿ, ಪುಟ್ಟಲಿಂಗಮ್ಮ, ಮಾಜಿ ಸದಸ್ಯ ಎಂ.ಸುನೀಲ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪ್ರಿಯದರ್ಶಿನಿ, ಕಾಂಗ್ರೆಸ್ ಮುಖಂಡರಾದ ಶೇಖರ್, ಟೈಲರ್ ಸಿದ್ದು, ಗುಣಶೇಖರ್, ಹೇಮಾ ಇನ್ನಿತರರು ಪಾಲ್ಗೊಂಡಿದ್ದರು.

Translate »