ಜೆಡಿಎಸ್ ಜಿಲ್ಲಾಧ್ಯಕ್ಷರ ಬದಲಾವಣೆಗೆ ಆಗ್ರಹ

ಸೋಮವಾರಪೇಟೆ: ಜೆಡಿಎಸ್ ಜಿಲ್ಲಾಧ್ಯಕ್ಷರನ್ನು ಬದಲಾವಣೆಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ಪ್ರಮುಖರು ಗುರು ವಾರ ಮಾಜಿ ಸಚಿವ ಜೀವಿಜಯ ಅವರ ಮನೆಯಲ್ಲಿ ಸಮಾಲೋಚನಾ ಸಭೆ ನಡೆಸಿದ್ದಾರೆ.

ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇ ಗೌಡ ಅವರನ್ನು ಭೇಟಿ ಮಾಡಿ, ತಮ್ಮ ಬೇಡಿಕೆ ಮುಂದಿಟ್ಟು ಸೂಕ್ತ ಪರಿಹಾರ ಸಿಗದಿದ್ದರೆ, ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪಕ್ಷದ ಜಿಲ್ಲಾ ಮಹಾ ಪ್ರಧಾನ ಕಾರ್ಯ ದರ್ಶಿ ಎಸ್.ಎಂ.ಡಿಸಿಲ್ವಾ ತಿಳಿಸಿದ್ದಾರೆ.

ಕೆ.ಎಂ.ಬಿ.ಗಣೇಶ್ ಅವರನ್ನು ಜೆಡಿಎಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿರುವು ದನ್ನು ಈ ಹಿಂದೆಯೇ ವಿರೋಧಿಸಲಾ ಗಿತ್ತು. ಆದರೆ ಪಕ್ಷದ ಹಿರಿಯ ನಾಯಕ ರಾದ ದೇವೇಗೌಡ ಅವರು, ಎರಡು ದಿನ ಗಳ ಒಳಗೆ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಲಾಗುವುದು ಎಂದು ಭರವಸೆ ನೀಡಿ ದ್ದರು. ಆದರೆ ಇದುವರೆಗೆ ಕ್ರಮ ಕೈಗೊಂ ಡಿಲ್ಲ. ಹಿಂದಿನ ವಿಧಾನಸಭಾ ಚುನಾವಣೆ ಯಲ್ಲಿ ಕಮಲದ ಪರ ಕೆಲಸ ಮಾಡಿದ ವ್ಯಕ್ತಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿರುವುದರಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಭರಿಸಲಾ ಗದ ನೋವಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಮೂರ್ನಾಲ್ಕು ದಿನಗಳ ಒಳಗೆ ಬೇಡಿಕೆ ಈಡೇರಿಸದಿದ್ದರೆ, ದೇವೆಗೌಡ ರನ್ನು ಭೇಟಿಯಾಗಿ ಕಾರ್ಯಕರ್ತರ ಕೊನೆಯ ನಿರ್ಧಾರವನ್ನು ಪ್ರಕಟಿಸಲಿದ್ದೇವೆ. ಪಕ್ಷದ ಕಾರ್ಯಕರ್ತರ ನಿರ್ಧಾರಕ್ಕೆ ಮಾಜಿ ಸಚಿವ ಜೀವಿಜಯ ಅವರು ಬೆಂಬಲ ವ್ಯಕ್ತಪಡಿ ಸಲು ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಪಕ್ಷದ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್.ಸುರೇಶ್, ರಾಜ್ಯ ಉಪಾಧ್ಯಕ್ಷ ಮನೋಜ್ ಬೋಪಯ್ಯ, ರಾಜ್ಯ ಎಸ್‍ಟಿ ಘಟಕದ ಉಪಾಧ್ಯಕ್ಷ ರಾಜಾರಾವ್, ಜಿಲ್ಲಾ ಕಾರ್ಯಾಧ್ಯಕ್ಷ ಕಾರ್ಮಾಡು ಸುಬ್ಬಣ್ಣ, ಜಿಲ್ಲಾ ಕಾರ್ಯದರ್ಶಿ ಕೆ.ಆರ್.ಸುರೇಶ್, ಜಿಪಂ ಮಾಜಿ ಅಧ್ಯಕ್ಷೆ ಎಚ್.ಬಿ.ಜಯಮ್ಮ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಶಿವ ದಾಸ್ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.