ಸಿಎಂ ಹೆಚ್‍ಡಿಕೆಯಿಂದ ಜಿಲ್ಲೆಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ
ಕೊಡಗು

ಸಿಎಂ ಹೆಚ್‍ಡಿಕೆಯಿಂದ ಜಿಲ್ಲೆಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ

May 27, 2018

ಮಡಿಕೇರಿ:  ರಾಜ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರು ವುದರಿಂದ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಸಮಸ್ಯೆಗಳು ಶೀಘ್ರ ಬಗೆಹರಿ ಯಲಿವೆ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಎರಡು ತಿಂಗಳ ಒಳ ಗಾಗಿ ಮುಖ್ಯಮಂತ್ರಿಗಳನ್ನು ಜಿಲ್ಲೆಗೆ ಆಹ್ವಾನಿಸಿ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾ ರಕ್ಕೆ ಬಂದಿದ್ದು, ಕೊಡಗಿನಲ್ಲಿ ಜಾತ್ಯತೀತ ಜನತಾದಳದ ಶಾಸಕರಿಲ್ಲದಿದ್ದರೂ, ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಪಕ್ಷವು ಪ್ರಾಮಾ ಣ ಕ ಪ್ರಯತ್ನ ನಡೆಸಲಿದೆ. ಕೊಡಗಿನಲ್ಲಿ ಸಮಸ್ಯೆಗಳ ಮೂಟೆಯೇ ಇದ್ದು, ಈಗಾ ಗಲೇ ಅವುಗಳನ್ನು ಪಟ್ಟಿ ಮಾಡಲಾಗಿದ್ದು, ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಗಮನ ಸೆಳೆಯ ಲಾಗುವುದು. ಅಲ್ಲದೆ ಮುಂದಿನ ಎರಡು ತಿಂಗಳ ಒಳಗಾಗಿ ಮುಖ್ಯಮಂತ್ರಿಗಳನ್ನು ಕೊಡಗಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಆಹ್ವಾನಿಸಿ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ಅಧಿಕಾ ರಿಗಳನ್ನು ಒಗ್ಗೂಡಿಸಿ ಸಮಸ್ಯೆಗಳ ಪರಿ ಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಸಂಕೇತ್ ಪೂವಯ್ಯ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಪಕ್ಷದ ಶಾಸಕರಿಲ್ಲದಿದ್ದರೂ, ಮಾಜಿ ಸಚಿವ ಬಿ.ಎ.ಜೀವಿಜಯ ಅವರ ಹಿರಿತನ, ಅನುಭವ, ಸೇವಾಭಾವನ್ನು ಸದು ಪಯೋಗಪಡಿಸಿಕೊಳ್ಳುವಂತೆ ಮುಖ್ಯ ಮಂತ್ರಿಗಳನ್ನು ಕೋರಲಾಗುವುದು. ಅಲ್ಲದೆ ಸ್ವತಃ ಮುಖ್ಯಮಂತ್ರಿಗಳಿಗೇ ಕೊಡಗಿನ ಸಮಸ್ಯೆಗಳ ಅರಿವು ಇರುವು ದರಿಂದ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಅವುಗಳ ನಿವಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಕಾಫಿ ಬೆಳೆಗಾರರ ಕೃಷಿ ಸಾಲ ಮನ್ನಾ, ಸ್ತ್ರೀಶಕ್ತಿ ಸಂಘಟನೆಗಳ ಬಡ್ಡಿ ಮನ್ನಾ, ಆನೆ ಮಾನವ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ರೂಪಿಸಿ ಹಂತಹಂತ ವಾಗಿ ಅನುಷ್ಠಾನಕ್ಕೆ ತರುವುದು, ಭತ್ತದ ಕೃಷಿಗೆ ಪ್ರೋತ್ಸಾಹ ಹಾಗೂ ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವುದು ಸೇರಿದಂತೆ ಜಿಲ್ಲೆಯ ಮತದಾರರ ವಿಶ್ವಾಸವನ್ನು ಪಡೆದು ಕೊಡಗಿನ ಅಭಿವೃದ್ಧಿಗೆ ಪ್ರಯತ್ನಿ ಸಲಾಗುವುದು. ಜೆಡಿಎಸ್ ಎಂದೂ ಚುನಾವಣೆ ಆಧಾರಿತ ರಾಜಕಾರಣ ಮಾಡುವುದಿಲ್ಲ ಎಂದು ಸಂಕೇತ್ ಪೂವಯ್ಯ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಹಿರಿಯ ಉಪಾಧ್ಯಕ್ಷ ಕೆ.ಜಿ.ನಾಣಯ್ಯ, ವೀರಾಜಪೇಟೆ ಕ್ಷೇತ್ರದ ಅಧ್ಯಕ್ಷ ಎಸ್.ಹೆಚ್. ಮತೀನ್, ಯುವ ಘಟಕದ ಅಧ್ಯಕ್ಷ ಅಮ್ಮಂಡ ವಿವೇಕ್, ವಿರಾಜಪೇಟೆ ನಗರಾ ಧ್ಯಕ್ಷ ಪಿ.ಎ.ಮಂಜುನಾಥ್ ಹಾಗೂ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ಪಿ.ವಿ. ರೆನ್ನಿ ಉಪಸ್ಥಿತರಿದ್ದರು.

Translate »