ಇಂದಿನಿಂದ ಜೆಡಿಎಸ್ `ಪಂಚರತ್ನ ರಥಯಾತ್ರೆ’
News

ಇಂದಿನಿಂದ ಜೆಡಿಎಸ್ `ಪಂಚರತ್ನ ರಥಯಾತ್ರೆ’

November 1, 2022

ಬೆಂಗಳೂರು, ಅ. 31(ಕೆಎಂಶಿ)-ಮುಂಬರುವ ವಿಧಾನಸಭಾ ಚುನಾ ವಣೆಯಲ್ಲಿ ಅಧಿಕಾರದ ಚುಕ್ಕಾಣೆ ಹಿಡಿ ಯಲು ರಾಜಕೀಯ ಪಕ್ಷಗಳು ಯಾತ್ರೆ ಗಳ ಮೊರೆ ಹೋಗಿವೆ.

ಆಡಳಿತಾರೂಢ ಬಿಜೆಪಿ ಸಂಕಲ್ಪ ಯಾತ್ರೆ ನಡೆಸುತ್ತಿದ್ದರೆ, ಕಾಂಗ್ರೆಸ್ ರಾಹುಲ್‍ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಮುಗಿಸಿ, ಮತ್ತೊಂದು ಬೇರೆ ಯಾತ್ರೆಗೆ ರೂಪರೇಷೆ ಸಿದ್ಧಪಡಿಸಿದೆ. ಇದರ ನಡುವೆ ರಾಷ್ಟ್ರೀಯ ಪಕ್ಷಗಳಿಗಿಂತ ತಾವೇನು ಕಡಿಮೆ ಇಲ್ಲ ವೆಂಬಂತೆ ಜಾತ್ಯತೀತ ಜನತಾದಳ ನಾಳೆ ಯಿಂದ ಪಂಚರತ್ನ ಯಾತ್ರೆ ಆರಂಭಿ ಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸ ಬೇಕೆಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾ ವಣಾ ಪ್ರಚಾರವನ್ನು ಆರಂಭಿಸುತ್ತಿದೆ.

ನವ ಕರ್ನಾಟಕ ನಿರ್ಮಾಣಕ್ಕಾಗಿ ಮಹಾ ಯಾತ್ರೆ ಹೆಸರಿನಲ್ಲಿ ಈ ರಥಯಾತ್ರೆ ಕೈಗೊಳ್ಳಲಾಗುತ್ತಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪಂಚರತ್ನ ಪರಿಪೂರ್ಣ ಪರಿಹಾರ ಎಂದು ಬಿಂಬಿಸಲಾಗುತ್ತಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಮಹಾಗಣ ಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಂಚರತ್ನ ಯಾತ್ರೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ. ಮಧ್ಯಾಹ್ನ ಮುಳ ಬಾಗಿಲಿನಲ್ಲಿ ಬೃಹತ್ ಸಮಾವೇಶ ಹಮ್ಮಿ ಕೊಳ್ಳಲಾಗಿದೆ. ನಗರದ ಗವಿ ಗಂಗಾಧರೇ ಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಂಚರತ್ನ ರಥಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದಾರೆ. ಮುಂಬರುವ ಚುನಾ ವಣೆಯ ಪ್ರಣಾಳಿಕೆ ಅಂಶಗಳನ್ನು ಈ ರಥಯಾತ್ರೆ ಸಂದರ್ಭದಲ್ಲಿ ಜನರ ಮುಂದಿಟ್ಟು ಜನಾಭಿಪ್ರಾಯವನ್ನು ಸಂಗ್ರಹಿಸಲಾಗುತ್ತದೆ. ಮೊದಲ ಹಂತದಲ್ಲಿ ನವೆಂಬರ್ 1ರಿಂದ ಡಿಸೆಂಬರ್ 6ರವರೆಗೂ ಈ ಯಾತ್ರೆ ಸಾಗಲಿದೆ. 1994ರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಹ ಕುರುಡುಮಲೆಯಿಂದಲೇ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿದ್ದರು. ಹೀಗಾಗಿ ಜೆಡಿಎಸ್ ಕೂಡ ಕುರುಡುಮಲೆಯಿಂದಲೇ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದೆ
ರಥ ಯಾತ್ರೆಯ ಉಸ್ತುವಾರಿಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಸಂಭವನೀಯ ಅಭ್ಯರ್ಥಿಗಳಿಗೆ ವಹಿಸಲಾಗಿದೆ. ಮೊದಲ ಹಂತದಲ್ಲಿ ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಹಾಸನ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಯಾತ್ರೆ ಸಂಚರಿಸಲಿದೆ. ಕುಮಾರಸ್ವಾಮಿಯವರ ಜೊತೆ ಕೆಲವೆಡೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಭಾಗವಹಿಸಲಿದ್ದಾರೆ.

Translate »