ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿರುವ ಜೆಡಿಎಸ್ ಅಧ್ಯಕ್ಷ ಗಣೇಶ್: ಆರೋಪ
ಕೊಡಗು

ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿರುವ ಜೆಡಿಎಸ್ ಅಧ್ಯಕ್ಷ ಗಣೇಶ್: ಆರೋಪ

March 28, 2019

ಗೋಣಿಕೊಪ್ಪಲು: ಮಾರ್ಚ್ 28 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕೊಡಗಿಗೆ ಆಗಮಿಸುತ್ತಾರೆ ಎಂಬ ಸುಳ್ಳು ಮಾಹಿತಿ ನೀಡುವ ಮೂಲಕ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಪ್ರಯತ್ನದಲ್ಲಿ ಜೆಡಿಎಸ್ ಪಕ್ಷಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆ ಯಾಗಿರುವ ಕೆ.ಬಿ.ಎಂ. ಗಣೇಶ್ ತೊಡಗಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡರುಗಳು ಅರೋಪಿಸಿದ್ದಾರೆ.

ಅಧ್ಯಕ್ಷರಾದ ನಂತರ ಕಾರ್ಯಕರ್ತರನ್ನು ಭೇಟಿ ಮಾಡಿ, ಪಕ್ಷ ಬಲವರ್ಧನೆಗೆ ಮುಂದಾಗದ ಗಣೇಶ್, ಸುಳ್ಳು ಮಾಹಿತಿ ನೀಡುವ ಮೂಲಕ ಪಕ್ಷದ ಚಟುವಟಿಕೆಗೆ ಹಿನ್ನಡೆಯಾಗುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಕೆ.ಸಿ. ನಾಣಯ್ಯ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಇವರು ಪಕ್ಷದ ಯವ ಕಾರ್ಯಕರ್ತರುಗಳನ್ನು ಭೇಟಿಯಾ ಗಿಲ್ಲ, ನಾವು ಕೂಡ ಇವರೊಂದಿಗೆ ತೊಡಗಿಕೊಳ್ಳುವುದಿಲ್ಲ. ಪ್ರತ್ಯೇಕವಾಗಿ ಮತ ಸೆಳೆಯುವ ಮೂಲಕ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮ ವಹಿಸುತ್ತಿದ್ದೇವೆ. ಜಿಲ್ಲಾ ಮಟ್ಟದಲ್ಲಿ ನಾವು ಪ್ರತ್ಯೇಕವಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇವೆ ಎಂದರು.

ಕಾರ್ಯಕರ್ತ ಹೆಚ್.ಬಿ.ಗಣೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ರಾಜ್ಯ ಅಧ್ಯಕ್ಷ ಹೆಚ್. ವಿಶ್ವನಾಥ್ ನೇಮಕ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರಿಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿ ಹೆಸರಿನಲ್ಲಿ ಸುಳ್ಳು ಮಾಹಿತಿ ನೀಡಿ, ಗೊಂದಲ ಮೂಡಿಸುತ್ತಿರುವ ಗಣೇಶ್ ಅವರ ನಡೆಯನ್ನು ನಾವು ಖಂಡಿಸುತ್ತೇವೆ. ಇವರಿಗೆ ನಾವು ಬೆಂಬಲ ನೀಡುವುದಿಲ್ಲ. ಅಭ್ಯರ್ಥಿ ಗೆಲುವಿಗೆ ನಾವು ಮುಂದಾಗಿದ್ದೇವೆ. ಚುನಾವಣೆ ನಂತರ ಎಸ್.ಎಂ.ಚೆಂಗಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಭರವಸೆ ನೀಡಿರುವ ವರಿಷ್ಠರ ನಿರ್ದೇ ಶನದಂತೆ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇವೆ ಎಂದರು.

ಜೆಡಿಎಸ್ ಎಸ್ಟಿ ವರ್ಗದ ಮುಖಂಡ ಪಿ.ಎಸ್. ಮುತ್ತ ಮಾತನಾಡಿ, ನಮಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿರುವ ಬಗ್ಗೆ ಅಸಮಾಧಾನವಿದೆ. ಇದನ್ನು ನಾವು ವ್ಯಕ್ತಪಡಿಸದೆ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಗೆಲುವಿಗೆ ಶ್ರಮವಹಿಸುತ್ತೇವೆ ಎಂದರು. ಗೋಷ್ಠಿಯಲ್ಲಿ ಮುಖಂಡರುಗಳಾದ ಎಸ್.ಎಂ.ಚೆಂಗಪ್ಪ, ಕರ್ತಮಾಡ ನರೇಂದ್ರ ಉಪಸ್ಥಿತರಿದ್ದರು.

Translate »