ರೈತ, ಜನ ವಿರೋಧಿ ಕಾಯ್ದೆ ಜಾರಿ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜೆಡಿಎಸ್ ಪ್ರತಿಭಟನೆ
ಮೈಸೂರು

ರೈತ, ಜನ ವಿರೋಧಿ ಕಾಯ್ದೆ ಜಾರಿ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜೆಡಿಎಸ್ ಪ್ರತಿಭಟನೆ

August 14, 2020

ಬೆಂಗಳೂರು, ಆ.13(ಕೆಎಂಶಿ)-ರಾಜ್ಯ ಸರ್ಕಾರದ ಜನ ವಿರೋಧಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕೆ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳನ್ನು ವಿರೋ ಧಿಸಿ ನಾವು ನಾಳೆಯಿಂದ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಳೆ ಯಿಂದಲೇ ರಾಜ್ಯಾದ್ಯಂತ ಹೋರಾಟ ಮಾಡಲು ಸಿದ್ಧತೆ ಮಾಡಿ ಕೊಂಡಿದ್ದೇವೆ. ನಾಳೆ ಹಾಸನದಲ್ಲಿ ಸಾಂಕೇತಿಕವಾಗಿ ಹೋರಾಟ ವನ್ನು ಉದ್ಘಾಟನೆ ಮಾಡುತ್ತೇವೆ ಎಂದರು.

ಹಾಸನ ಜಿಲ್ಲೆಯ ಎಲ್ಲಾ ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಇನ್ನೂರು ಜನ ಮಾತ್ರ ಸೇರಿ ಪ್ರತಿಭಟನೆ ಮಾಡುತ್ತೇವೆ. ಘೋಷಣೆಗಳನ್ನು ಕೂಗುವುದಿಲ್ಲ. ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗೆ ಮನವಿ ಕೊಡುತ್ತೇವೆ. ನಮ್ಮ ಪಕ್ಷದಲ್ಲಿ ಈ ಹೋರಾಟದ ಬಗ್ಗೆ ಯಾವುದೇ ಒಡಕಿಲ್ಲ. ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರ ತಂದಿರುವ ಮೂರು ಕಾಯ್ದೆಗಳಿಗೆ ನಮ್ಮ ಸಮ್ಮತಿ ಇಲ್ಲ. ಈ ಕಾಯಿದೆಗಳನ್ನು ಸುಗ್ರೀವಾಜ್ಞೆ ಮೂಲಕ ಅನುಷ್ಠಾನಕ್ಕೆ ತಂದಿದ್ದಾರೆ. ಇದನ್ನು ನಾವು ವಿರೋಧಿಸಲು ರಾಜ್ಯಾದ್ಯಂತ ಹೋರಾಟ ಮಾಡಲು ಸಿದ್ಧವಾಗಿದ್ದೇವೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸೇರಿ ದಂತೆ ಬೆರಳೆಣಿಕೆ ಮಂದಿ ಮಾತ್ರ ಶಾಂತಿಯುತ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಒಂದು ಕಡೆ ಕುಳಿತು ಕೊಂಡು ಪ್ರತಿಭಟನೆ ಮಾಡುತ್ತೇವೆ. ಐದಾರು ಜನ ಮುಖಂಡರು ಡಿಸಿಗೆ ಮನವಿ ಕೊಡುತ್ತೇವೆ. ರಾಜ್ಯಪಾಲರಿಗೆ ಕಳುಹಿಸಿಕೊಡು ವಂತೆ ಡಿಸಿ ಅವರಿಗೆ ಮನವಿ ಮಾಡುತ್ತೇವೆ. 30 ಜಿಲ್ಲೆಗಳಲ್ಲಿ ಈ ಹೋರಾಟ ಹಂತಹಂತವಾಗಿ ಮಾಡುತ್ತೇವೆ ಎಂದರು.

ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕ. ಸಣ್ಣ, ಮಧ್ಯಮ ವರ್ಗದ ರೈತರಿಗೆ ಅನ್ಯಾಯವಾಗುತ್ತದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು.ಈ ಕಾಯ್ದೆಯಿಂದ ಅನಾನುಕೂಲವೇ ಹೆಚ್ಚು ಎಂದರು. ಬೆಂಗಳೂರಿನ ಗಲಭೆ ಪ್ರಕರಣ ವನ್ನು ಸಿಬಿಐಗೆ ವಹಿಸಿ ಅಂತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ. ಈಗಿರೋ ಆಯುಕ್ತರು ಸಿಬಿಐನಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ತಾರತಮ್ಯ ಮಾಡೊಲ್ಲ. ಆದರೆ, ಅಂತಿಮ ನಿರ್ಧಾರ ಸರ್ಕಾರ ತೆಗೆದುಕೊಳ್ಳಲಿ. ನಿಜವಾದ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ದೇವೇಗೌಡರು ಆಗ್ರಹಿಸಿದರು.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ. ದೇಶದ ಯಾವ ಭಾಗದಲ್ಲೂ ಇಂಥ ಪ್ರಕರಣ ನಡೆಯಬಾರದು. ದೊಂಬಿ, ಗಲಾಟೆ ಘಟನೆ ಸಂಬಂಧ 150 ಮಂದಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ನಿಜವಾದ ಅಪರಾಧಿಗಳು ಎಷ್ಟು? ಇವರಲ್ಲಿ ಎಲ್ಲರೂ ಅಪರಾಧಿಗಳು ಇರಲಿಕ್ಕೆ ಸಾಧ್ಯವಿಲ್ಲ. ತಪ್ಪಿತಸ್ಥರನ್ನು ಮಾತ್ರ ಘಟನೆಗೆ ಹೊಣೆಗಾರರನ್ನಾಗಿ ಮಾಡಿ. ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ. ನಿರಪರಾಧಿಗಳಿಗೆ ಶಿಕ್ಷೆ ಬೇಡ ಎಂದರು.

Translate »