ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಚಿವ ಅಮರನಾಥ ಶೆಟ್ಟಿ ವಿಧಿವಶ

ಮಂಗಳೂರು: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾದಳ ಮುಖಂಡ, ಹಿರಿಯ ರಾಜಕಾರಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ. ಮೂಡಬಿದಿರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿ ದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ನಿಧನರಾದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಆಗಿದ್ದ ಅಮರನಾಥ ಶೆಟ್ಟಿ 1965ರಲ್ಲಿ ರಾಜ ಕಾರಣ ಪ್ರವೇಶಿಸಿದರು. ಪಾಲಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದ್ದರು. ಮೂಡುಬಿದ್ರಿ ಕ್ಷೇತ್ರದಿಂದ 1983ರಲ್ಲಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. 1987 ಮತ್ತು 1994ರಲ್ಲಿ ಅದೇ ಕ್ಷೇತ್ರದಿಂದ ಜಯಗಳಿಸಿದ್ದರು. ಪ್ರವಾಸೋ ದ್ಯಮ ಮತ್ತು ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ 1983, 1987 ಮತ್ತು 1994 ಹೀಗೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಪ್ರವಾ ಸೋದ್ಯಮ ಮತ್ತು ಮುಜರಾಯಿ ಸಚಿವರಾಗಿದ್ದರು. ನಂತರ ಅಭಯಚಂದ್ರ ಅವರ ಎದುರು ನಿರಂತರ ಪರಾಭವಗೊಂಡು, ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.