ಚನ್ನಪಟ್ಟಣದ ಗೋಮತಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ
ಹಾಸನ

ಚನ್ನಪಟ್ಟಣದ ಗೋಮತಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ

January 14, 2019

ಹಾಸನ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ: ಹೆಚ್.ಡಿ.ರೇವಣ್ಣ

ಹಾಸನ: ಜಿಲ್ಲೆಯಲ್ಲಿ ಕಳೆದ 10 ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕ್ರಮ ಕೈಗೊಳ್ಳಲಾ ಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಭರವಸೆ ನೀಡಿದರು.

ನಗರದ ಚನ್ನಪಟ್ಟಣದಲ್ಲಿರುವ ಗೋಮತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗದೇ ನೋವು ಉಂಟಾಗಿರುವುದು ನನಗೆ ತಿಳಿದಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ರೈತರ ಸಾಲಮನ್ನಾವಾಗಿದೆ. ಉಳಿದ ಸಾಲ ಮನ್ನಾವನ್ನು ಶೀಘ್ರದಲ್ಲಿಯೇ ಪೂರ್ಣ ಗೊಳಿಸಲಾಗುವುದು ಎಂದು ತಿಳಿಸಿದರು.

ಆನೆ ಹಾವಳಿಯಿರÀುವ ಜಾಗದಲ್ಲಿನ ಮಕ್ಕಳಿಗಾಗಿ ಎರಡು ವಸತಿ ಶಾಲೆಯನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಆ ಭಾಗದವರಿಗೆ ಅನುಕೂಲವಾಗಲಿದೆ. ಹಾಸನ-ಬೇಲೂರು ರೈಲು ಮಾರ್ಗಕ್ಕೆ ಈಗಾಗಲೇ ಸಂಸತ್ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭ ವಾಗಲಿದೆ ಎಂದರು.

ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆದ್ಯತೆ ನೀಡಲಾಗಿದೆ. ಈಗಾಗಲೇ ಚನ್ನ ಪಟ್ಟಣ ಮಾರ್ಗ ಕಾಮಗಾರಿ ನಡೆಯು ತ್ತಿದೆ ಎಂದ ಅವರು, ಹಾಸನ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಈಗ ನಮ್ಮ ಜೊತೆ ಇಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಪಟೇಲ್ ಶಿವರಾಂ ಮಾತನಾಡಿ, ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆ ಅಷ್ಟೊಂದು ಕಷ್ಟವಾಗುವುದಿಲ್ಲ. ಕಾರ್ಯ ಕರ್ತರು ಎಲ್ಲಾ ಒಗ್ಗೂಡಿ ಶ್ರಮಿಸುವಂತೆ ಮನವಿ ಮಾಡಿದರು.

ಶಾಸಕ ಹೆಚ್.ಕೆ.ಕುಮಾರಸ್ವಾಮಿ ಮಾತನಾಡಿ, ಮೈತ್ರಿ ಸರ್ಕಾರದಲ್ಲಿ ಹೆಚ್. ಡಿ.ಕುಮಾರಸ್ವಾಮಿ ಸಿಎಂ ಆದ ಮೇಲೆ ಜನಪ್ರಿಯ ಯೋಜನೆಗಳು ಜಾರಿಗೆ ಬಂದಿದೆ. ನಮ್ಮ
ಪಕ್ಷ ಬಲಿಷ್ಠವಾಗಿದೆ ಎಂದರು.

ಬೇಲೂರು ಕ್ಷೇತ್ರದ ಶಾಸಕ ಲಿಂಗೇಶ್ ಮಾತನಾಡಿ, ಮೈತ್ರಿ ಸರ್ಕಾರ ಬಂದ ಮೇಲೆ ಮೊದಲು ರೈತರ ಸಾಲಮನ್ನಾಕ್ಕೆ ಮುಂದಾಯಿತು. ಜಿಲ್ಲೆಯಲ್ಲಿ ನಿಂತು ಹೋಗಿದ್ದ ಎಲ್ಲಾ ಅಭಿವೃದ್ಧಿ ಕೆಲಸಗಳು ಪ್ರಾರಂಭವಾಗಿದೆ. ಸಚಿವ ರೇವಣ್ಣನವರು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ ಎಂದರು.

ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಮುಂದೆ ಲೋಕಸಭಾ ಚುನಾವಣೆ ಬರಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಲಹೆ, ಮಾರ್ಗದರ್ಶನದಲ್ಲಿ ಪ್ರಜ್ವಲ್ ರೇವಣ್ಣ ತನ್ನದೆಯಾದ ಛಾಪು ಮೂಡಿಸಿ ಕೊಂಡು ಬಂದಿದ್ದಾರೆ ಎಂದರು.

ಜೆಡಿಎಸ್ ಮುಖಂಡ ಕೆ.ಎಂ. ರಾಜೇ ಗೌಡ ಮಾತನಾಡಿ, ನಾಡು ಕಂಡ ಅತ್ಯು ನ್ನತ ರಾಜಕಾರಣಿ ಮಾಜಿ ಪ್ರಧಾನಿ ದೇವೇಗೌಡರು. 63 ವರ್ಷ ಸುದೀರ್ಘ ವಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿ ದ್ದಾರೆ. ಅಭಿವೃದ್ಧಿಯಲ್ಲಿ ರೇವಣ್ಣನವರ ಪಾತ್ರ ಸೇರಿದೆ ಎಂದರು.
ಅರಕಲಗೂಡು ಶಾಸಕ ಎ.ಟಿ. ರಾಮ ಸ್ವಾಮಿ, ಬೇಲೂರು ತಾಲೂಕು ಜೆಡಿಎಸ್ ಮುಖಂಡ ತೋ.ಚ. ಅನಂತಸುಬ್ಬ ರಾಯ್ ಮಾತನಾಡಿದರು.

ಸಭೆಯಲ್ಲಿ ಭವಾನಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ಇಬ್ಬರೂ ಕಾರ್ಯಕರ್ತರ ಜೊತೆ ಕುಳಿತು ಗಮನಸೆಳೆದರು. ಸಭೆಗೆ ಮೊದಲು ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್‍ಗೆ ಎರಡು ನಿಮಿಷ ಮೌನ ಆಚ ರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇ ಗೌಡ, ಜಿಪಂ ಉಪಾಧ್ಯಕ್ಷ ಸುಪ್ರದೀಪ್, ಮುಖಂಡರಾದ ಮಳಲಿ ದೊಡ್ಡೆಗೌಡ, ಬಿ.ಎ.ಜಗನ್ನಾಥ್, ಜಾವಗಲ್ ರಾಜ ಶೇಖರ್, ಜಿ.ಓ.ಮಹಾಂತಪ್ಪ, ತಾಲೂಕು ಅಧ್ಯಕ್ಷ ಎಸ್.ದ್ಯಾವೇಗೌಡ, ಕಾರ್ಯಾಧ್ಯಕ್ಷ ಚನ್ನವೀರಪ್ಪ, ಸ್ವರೂಪ್, ನಗರಸಭೆ ಮಾಜಿ ಅಧ್ಯಕ್ಷ ಸೈಯದ್ ಅಕ್ಬರ್ ಹಾಜರಿದ್ದರು.

ಬಾಕ್ಸ್…..
ಕಾಂಗ್ರೆಸ್ ಷರತ್ತುಗಳ ಮೇಲೆ ಹೆಚ್‍ಡಿಕೆ ಸರ್ಕಾರ: ಹೆಚ್‍ಡಿಡಿ
ರಾಜ್ಯದಲ್ಲಿ ಸಿಎಂ ಕುಮಾರಸ್ವಾಮಿ ಅವರಿಗೆ ಹೆಚ್ಚು ಒತ್ತಡ ಇರೋದು ನಿಜ. ಎಲ್ಲವನ್ನು ಸಾರ್ವಜನಿಕವಾಗಿ ಹೇಳುವುದಕ್ಕಾಗುವುದಿಲ್ಲ. ನಾನು ಯಾರನ್ನೂ ದೂರುತ್ತಿಲ್ಲ. ಕಾಂಗ್ರೆಸ್‍ನ ಕೆಲವು ಷರತ್ತುಗಳಿಂದ ಕುಮಾರಸ್ವಾಮಿ ಅವರು ಸರ್ಕಾರ ನಡೆಸುತ್ತಿದ್ದಾರೆ ಎಂದು ದೇವೇಗೌಡರು ವಿಷಾದ ವ್ಯಕ್ತಪಡಿಸಿದರು.

ನಗರದ ಚನ್ನಪಟ್ಟಣದಲ್ಲಿರುವ ಗೋಮತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಾನು ಮಾಡಿದ ಯಾವುದೇ ಕಾರ್ಯಕ್ರಮಕ್ಕೆ ಅಡಿ ್ಡಮಾಡಬಾರದು ಎಂದು ಹೇಳಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಜ. 17ರಂದು ಜೆಡಿಎಸ್ ಅಲ್ಪ ಸಂಖ್ಯಾತರ ಬೃಹತ್ ಸಮಾವೇಶ ನಡೆಯಲಿದೆ. ಜ. 29ರಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಜ.30ರಂದು ಪಕ್ಷದ ಕಾರ್ಯಕರ್ತರ ಸಮಾವೇಶದ ಮಾಡುವ ಬಗ್ಗೆ ಚಿಂತನೆ ಮಾಡಿದ್ದೇನೆ ಎಂದು ಹೇಳಿದರು.

Translate »