ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

August 6, 2018

ಬೆಂಗಳೂರು: ಮೈತ್ರಿ ಸರ್ಕಾರದ ದೋಸ್ತಿ ರಾಜ್ಯ ಮಟ್ಟದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಘೋಷಿಸಿದ್ದು, ಮಿನಿ ಸಮರದ ಮೈತ್ರಿ ವದಂತಿಗೆ ತೆರೆ ಎಳೆದಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲಿದೆ. ರಾಜ್ಯ ಮಟ್ಟದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಕೆಯಾಗಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪ್ರತ್ಯೇಕ ಸ್ಪರ್ಧೆ ಯಿಂದ ಮೈತ್ರಿ ಸರ್ಕಾರಕ್ಕೆ ತೊಂದರೆಯಾಗುವುದಿಲ್ಲ.

ಸಂಘರ್ಷವಿಲ್ಲದೆ ಮತ್ತು ಸೌಹಾರ್ದಯುತವಾಗಿ ಸ್ಥಳೀಯ ಸಂಸ್ಥೆಯ ಚುನಾವಣೆ ನಡೆಯಬೇಕೆಂಬುದು ನಮ್ಮ ಉದ್ದೇಶ ಎಂದರು. ಲೋಕಸಭೆ ಚುನಾವಣೆ ವೇಳೆ ನಮ್ಮ ನಮ್ಮ ಶಕ್ತಿಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಿಕೊಳ್ಳುತ್ತೇವೆ. ದೆಹಲಿ ಮಟ್ಟದ ನಾಯಕರ ಅಭಿಪ್ರಾಯ ಪಡೆದು ಲೋಕಸಭೆ ಚುನಾವಣೆ ಸೀಟುಹಂಚಿಕೆ ಮಾಡಲಾಗುತ್ತದೆ. ಆದರೆ ಸ್ಥಳೀಯ ಸಂಸ್ಥೆಯ ಚುನಾವಣೆ ಬಗ್ಗೆ ನಮ್ಮದೇ ತೀರ್ಮಾನ ಎಂದು ತಿಳಿಸಿದರು. ರೈತರ ಸಾಲ ಮನ್ನಾ ವಿಚಾರದಲ್ಲಿ ರಾಷ್ಟ್ರೀಯ ಪಕ್ಷವೊಂದು ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ದೇವೇಗೌಡರು ಕಿಡಿಕಾರಿದರು.

ಸಿದ್ದರಾಮಯ್ಯ ಸರ್ಕಾರದ ಎಲ್ಲಾ ಯೋಜನೆ ಳು ಮುಂದುವರೆಯಲಿವೆ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯರ ಎರಡೂ ಬಜೆಟ್ ನಲ್ಲಿ ಯಾವುದೇ ಜಿಲ್ಲೆಗೆ ತಾರತಮ್ಯವಾಗಿಲ್ಲ ಎಂಬ ಕಿರುಹೊತ್ತಿಗೆ ಸಿದ್ಧಪಡಿಸಲು ನಿರ್ಧ ರಿಸಲಾಗಿದೆ. ಸ್ಥಳೀಯ ಸಂಸ್ಥೆಯ ಚುನಾವಣೆ ವೇಳೆ ಈ ಕಿರುಹೊತ್ತಿಗೆ ಹಂಚಿ ಪ್ರಚಾರ ಮಾಡಲು ತೀರ್ಮಾನಿಸಿದ್ದು, ನೂತನ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನೇತೃತ್ವದಲ್ಲಿ ಕಿರುಹೊತ್ತಿಗೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ ಎಂದು ದೇವೇಗೌಡರು ಹೇಳಿದರು.

Translate »