ಮದುವೆ ಮನೆಯಲ್ಲಿ ಚಿನ್ನಾಭರಣ, ನಗದು ಕಳವು
ಮೈಸೂರು

ಮದುವೆ ಮನೆಯಲ್ಲಿ ಚಿನ್ನಾಭರಣ, ನಗದು ಕಳವು

May 4, 2018

ಬೆಟ್ಟದಪುರ:  ಮದುವೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಚಿನ್ನ, ಬೆಳ್ಳಿ ಹಾಗೂ ನಗದು ಕಳವಾಗಿರುವ ಘಟನೆ ಇಲ್ಲಿಗೆ ಸಮೀಪದ ಮೇಲೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪ್ರಸನ್ನ ಹಾಗೂ ಮಹದೇವ್ ಎಂಬುವರ ಮನೆಯಲ್ಲಿ 1 ಕೆ.ಜಿ. ಬೆಳ್ಳಿ, 60 ಗ್ರಾಂ ಚಿನ್ನ ಹಾಗೂ 25 ಸಾವಿರ ರೂ. ನಗದು ಕಳ್ಳತನ ನಡೆದಿದೆ. ಮದುವೆ ಕಾರ್ಯ ನಿರ್ಮಿತ್ತ ಮನೆಯಲ್ಲಿ ಚಿನ್ನ, ಬೆಳ್ಳಿ ಹಾಗೂ ನಗದು ಇಡಲಾಗಿತ್ತು. ಈ ಸಂದರ್ಭದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಖದೀಮರು ಕಳವು ಮಾಡಿದ್ದಾರೆ.

ಈ ಸಂಬಂಧ ಬೆಟ್ಟದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಬ್‍ಇನ್ಸ್‍ಪೆಕ್ಟರ್ ಡಿ.ಆರ್.ಜಯಸ್ವಾಮಿ ನೇತೃತ್ವದಲ್ಲಿ ಮೈಸೂರಿನ ಶ್ವ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿತು.

Translate »