ಬರಗಾಲ: ಕೃಷಿಕರು, ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ
ಮೈಸೂರು

ಬರಗಾಲ: ಕೃಷಿಕರು, ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ

November 29, 2018

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಹಿನ್ನೆಲೆಯಲ್ಲಿ ಕೃಷಿಕರು ಮತ್ತು ಕಾರ್ಮಿ ಕರಿಗೆ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ 8.5 ಕೋಟಿ ಮಂದಿಗೆ ಉದ್ಯೋಗ ಕಲ್ಪಿಸಬೇ ಕೆಂಬ ಯೋಜನೆ ರೂಪಿಸಲಾಗಿತ್ತು. ಆದರೆ ನೂರು ತಾಲೂಕು ಗಳಲ್ಲಿ ಬರ ಭೀಕರವಾಗಿ ಕಾಣಿಸಿಕೊಂಡಿರುವುದರಿಂದ ಕೃಷಿಕರು ಮತ್ತು ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರದಿಂದ ಗುಳೆ ಹೋಗುವುದನ್ನು ತಪ್ಪಿಸಬಹುದಲ್ಲದೆ, ಶಾಶ್ವತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಹಕಾರಿಯಾಗಲಿದೆ. ಕೆಲಸವಿಲ್ಲದೆ ಯಾರೂ ಗುಳೆ ಹೋಗಬಾರದು ಮತ್ತು ಹಸಿವಿನಿಂದ ಬಳಲಬಾರದೆಂಬ ಉದ್ದೇಶದಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳ ಲಾಗಿದೆ. ಪ್ರಸಕ್ತ ವರ್ಷ ವಿವಿಧ ಮಾದರಿಯ 27 ಸಾವಿರ ಕಾಮಗಾರಿಗಳನ್ನು 2350 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳ ಲಾಗು ವುದು.

ಡಿಸೆಂಬರ್ ವೇಳೆಗೆ ಸ್ಥಳೀಯ ಮಟ್ಟದಲ್ಲೇ ಟೆಂಡರ್ ಕರೆದು ಎಲ್ಲಾ ಕಾಮಗಾರಿಗಳನ್ನು 2019ರ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣ ಗೊಳಿಸುವಂತೆ ಇಂದಿನ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ. ಎಲ್ಲಿ ಎರಡು ದಿನಗಳಾ ದರೂ ಕುಡಿಯುವ ನೀರು ದೊರೆಯುವುದಿಲ್ಲವೋ ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಕಲ್ಪಿಸುವಂತೆ ಸೂಚಿಸಲಾಗಿದೆ ಎಂದರು. ಪಂಚಾಯತ್‍ಗಳೇ ಹಳ್ಳಿಗಳಲ್ಲೂ ಕಸ ವಿಲೇವಾರಿ ಮಾಡುವ ಯೋಜನೆ ಅನುಷ್ಠಾನ ತಂದಿದ್ದು, ಮೊದಲ ಹಂತದಲ್ಲಿ 500 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ.

ನಗರ ಪ್ರದೇಶಗಳ ಮಾದರಿಯಲ್ಲೇ ಹಸಿ ಮತ್ತು ಒಣ ಕಸ ಎಂದು ವಿಂಗಡಣೆ ಮಾಡಲಾಗುವುದು. ಹಸಿ ಕಸವನ್ನು ರೈತರು ಸ್ಥಳೀಯವಾಗಿಯೇ ಬಳಸಿಕೊಳ್ಳಲಿದ್ದಾರೆ. ಒಣ ಕಸ ಮಾತ್ರ ಪಂಚಾಯತ್‍ಗಳು ನಿರ್ವಹಣೆ ಮಾಡಲಿವೆ. ಸ್ವಚ್ಛತೆಗಾಗಿ ಪಂಚಾ ಯತ್‍ಗಳು ಪ್ರತ್ಯೇಕ ತೆರಿಗೆಯನ್ನು ವಿಧಿಸುವ ಅಧಿಕಾರವನ್ನು ನೀಡಲಾಗಿದೆ. ಈಗಾಗಲೇ ಉಡುಪಿಯ ಕೆಲವು ಪಂಚಾಯಿತಿ ಗಳಲ್ಲಿ ಪ್ರತಿ ಮನೆಯಿಂದ ಮಾಸಿಕ 80 ರೂ. ತೆರಿಗೆ ವಸೂಲಿ ಮಾಡುತ್ತಿದ್ದಾರೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

Translate »