ಬೇಲೂರಿನಲ್ಲಿ ಉದ್ಯೋಗ ಮೇಳ; ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ
ಹಾಸನ

ಬೇಲೂರಿನಲ್ಲಿ ಉದ್ಯೋಗ ಮೇಳ; ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ

February 1, 2019

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ

ಬೇಲೂರು: ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಠಿಗೆ ಪ್ರಯತ್ನ ನಡೆಯು ತ್ತಿದ್ದು ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು.

ಬೇಲೂರಿನ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತ ನಾಡಿದ ಅವರು, ವಸ್ತ್ರೋದ್ಯಮ ಸೇರಿ ದಂತೆ ಹೊಸ ಕಾರ್ಖಾನೆಗಳ ಸ್ಥಾಪನೆಗೆ ಪ್ರಯತ್ನ ನಡೆಯುತ್ತಿದೆ. ಜೊತೆಗೆ ಉದ್ಯೋಗ ಮೇಳದ ಮೂಲಕ ಕೆಲಸ ಒದಗಿಸುವ ಪ್ರಯತ್ನಗಳೂ ನಡೆದಿವೆ ಎಂದು ಸಚಿವರು ಹೇಳಿದರು.

ಫೆ.16 ರಂದು ಹಾಸನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗು ತ್ತಿದ್ದು ಜಿಲ್ಲೆಯ ಎಲ್ಲಾ ನಿರುದ್ಯೋಗಿ ಯುವಕರು ಇದರ ಲಾಭ ಪಡೆಯಬೇಕು ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ 1450 ಕೋಟಿ ರೂಪಾಯಿ ರೈತರ ಸಾಲಮನ್ನಾ ಆಗಿದ್ದು 2,20000 ಕುಟುಂಬಗಳಿಗೆ ಋಣ ಮುಕ್ತ ಪತ್ರಗಳನ್ನು ನೀಡಲಾಗುವುದು. ಸಾಲಮನ್ನಾ ಪ್ರಕ್ರಿಯೆ ಯಲ್ಲಿ ಹಾಸನ ಜಿಲ್ಲೆ ಮುಂಚೂಣಿ ಯಲ್ಲಿದ್ದು ಇದಕ್ಕೆ ಸಹಕರಿಸಿದ ಎಲ್ಲಾ ಅಧಿಕಾರಿಗಳಿಗೂ ಅಭಿನಂದಿಸುವುದಾಗಿ ಸಚಿವರು ಹೇಳಿದರು.

ಬೇಲೂರು ತಾಲೂಕಿನ ಅಭಿವೃದ್ದಿಗೆ ವಿಶೇಷ ಗಮನ ಹರಿಸಲಾಗಿದೆ. ಎಲ್ಲಾ ರಸ್ತೆ ಕಾಮಗಾರಿಗಳು ಹಾಗೂ ನೀರಾವರಿ ಯೋಜನೆಗಳಿಗೆ ಮರುಚಾಲನೆ ದೊರೆ ಯುತ್ತಿದೆ. ಕ್ಷೇತ್ರದಲ್ಲಿ ಸುಮಾರು 180 ಕೋಟಿ ರೂ.ಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಹೇಳಿದರು.

ಹಳ್ಳಿಗಳಲ್ಲಿ ಪೆಟ್ಟಿಗೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡು ವುದನ್ನು ಸಂಪೂರ್ಣವಾಗಿ ನಿಯಂತ್ರಿಸ ಬೇಕಿದ್ದು ಈ ಬಗ್ಗೆ ಅಬಕಾರಿ ಹಾಗೂ ಪೊಲೀಸ್ ಇಲಾಖೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೇಲೂರು ಕ್ಷೇತ್ರದ ಶಾಸಕ ಕೆ.ಎಸ್. ಲಿಂಗೇಶ್ ಅವರು, ತಾಲೂಕಿನಲ್ಲಿ ಕನಿಷ್ಠ ಎರಡು ಹೊಸ ಗಾರ್ಮೆಂಟ್ಸ್ ಉದ್ಯಮ ಪ್ರಾರಂಭಕ್ಕೆ ಸಹಕಾರ ನೀಡುವ ಮೂಲಕ ಯುವ ನಿರುದ್ಯೋಗಿಗಳಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಬೇಕು ಎಂದರು.

ಬೇಲೂರಿನಲ್ಲಿ ವಿವಿಧ ಯೋಜನೆಗಳ ಮೂಲಕ ಸುಮಾರು 250 ಕೋಟಿ ರೂಪಾಯಿಗಳ ಕಾಮಗಾರಿ ಮಂಜೂರಾ ಗಿದೆ. ಹತ್ತಾರು ವರ್ಷಗಳಿಂದ ಬಾಕಿ ಉಳಿ ದಿದ್ದ ಕಾಮಗಾರಿಗಳು ಚಾಲನೆ ಗೊಂಡಿವೆ. ಶಾಂತಲಾ ಕಲಾಭವನಕ್ಕೆ 5 ಕೋಟಿ ರೂ. ಮಂಜೂರಾಗಿದ್ದು, 1.5 ಕೋಟಿ ರೂ. ಬಿಡುಗಡೆಯಾಗಿದೆ. ಇದಕ್ಕೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಮರ್ಪಿಸುವುದಾಗಿ ಶಾಸಕರು ಹೇಳಿದರು.

ಜಿಪಂ ಸದಸ್ಯೆ ಭವಾನಿ ರೇವಣ್ಣ ಮಾತ ನಾಡಿ, ಕ್ಷೇತ್ರದ ಜನತೆಯೊಂದಿಗಿನ ತಮ್ಮ ಒಡನಾಟ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ ರೇವಣ್ಣ ಅವರಿಗೆ ಯುವ ಸಮು ದಾಯಕ್ಕೆ ಉದ್ಯೋಗ ಅವಕಾಶಗಳನ್ನು ಒದಗಿಸಿಕೊಡಲು ಇರುವ ಕಾಳಜಿ ಮತ್ತು ಅವರು ನಡೆಸುತ್ತಿರುವ ಪ್ರಯತ್ನಗಳನ್ನು ಸ್ಮರಿಸಿದರಲ್ಲದೇ ಬೇಲೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾಜಿ ಪ್ರಧಾನಿ ಯವರು ಎಲ್ಲಾ ರೀತಿಯ ನೆರವು ಒದಗಿ ಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಲತಾ ದಿಲೀಪ್ ಕುಮಾರ್, ಲತಾ ಮಂಜೇಶ್ವರಿ, ಸಯ್ಯದ್ ತೌಫಿಕ್, ಮಂಜಪ್ಪ, ಉಪವಿಭಾಗಾ ಧಿಕಾರಿ ಗಿರೀಶ್‍ನಂದನ್ ತಹಶೀಲ್ದಾರ್ ಮೇಘನಾ, ಉದ್ಯೋಗ ವಿನಿಮಯ ಅಧಿಕಾರಿ ಜೆ.ಬಿ ವಿಜಯಲಕ್ಷ್ಮಿ ಮತ್ತಿ ತರರು ಹಾಜರಿದ್ದರು.

Translate »