ಜು.23ರಂದು ನಗರದಲ್ಲಿ ಉದ್ಯೋಗ ಮೇಳ
ಚಾಮರಾಜನಗರ

ಜು.23ರಂದು ನಗರದಲ್ಲಿ ಉದ್ಯೋಗ ಮೇಳ

July 20, 2018

ಚಾಮರಾಜನಗರ:  ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಉದ್ಯೋಗ ಮೇಳವನ್ನು ಜು.23ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.

ಮೈಸೂರು, ಬೆಂಗಳೂರು ಮೂಲದ ಖಾಸಗಿ ಕಂಪನಿಗಳಾದ ಹೈಪ್ರೋಸೆಸ್ ಸರ್ವೀಸ್ (ಇಂಡಿಯಾ) ಪ್ರೈ. ಲಿ., ಯುರೇಕಾ ಫೋರ್ಬ್, ನವಭಾರತ್ ಫರ್ಟಿಲೈಸರ್ ಲಿ., ಬಿಎಸ್‍ಐ ಕಾರ್ಪೋ ರೇಷನ್, ಪದ್ಮ ಅಂಡ್ ಕೋ, ಇಮ್ಯಾನ್ಯುಯಲ್ ಸಾಫ್ಟ್ ಸ್ಕಿಲ್ ಪ್ರೈ. ಲಿ., ಗಿರೀಶ್ ಗಾರ್ಮೆಂಟ್ಸ್, ಚಾಮರಾಜನಗರದ ಎಲ್‍ಐಸಿ ಆಫ್ ಇಂಡಿಯಾ ಸೇರಿದಂತೆ ಇತರೆ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ ವಿದ್ಯಾರ್ಹತೆಯುಳ್ಳ 18 ರಿಂದ 35ರ ವಯೋಮಿತಿಯೊಳಗಿರುವವರು ಉದ್ಯೋಗ ಮೇಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ಸ್ವವಿವರಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಜಿಲ್ಲಾ ಉದ್ಯೋಗಾಧಿಕಾರಿ (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Translate »