ಮೈಸೂರಲ್ಲಿ ಫೆ.19ರಂದು ಉದ್ಯೋಗ ಮೇಳ
ಮೈಸೂರು

ಮೈಸೂರಲ್ಲಿ ಫೆ.19ರಂದು ಉದ್ಯೋಗ ಮೇಳ

February 11, 2021

ಮೈಸೂರು,ಫೆ.10(ಆರ್‍ಕೆಬಿ)-ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಮೈಸೂರು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ದೊಡ್ಡಕೆರೆ ಮೈದಾನದ ಮೈಸೂರು ವಸ್ತು ಪ್ರದರ್ಶನ ಆವರಣದಲ್ಲಿ ಫೆ.19ರಂದು ಉದ್ಯೋಗ ಮೇಳ ಆಯೋಜಿ ಸಲಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.

ಪ್ರತಿಷ್ಠಿತ ಸಾಫ್ಟ್‍ವೇರ್ ಕಂಪನಿಗಳು, ಕಾರ್ಖಾನೆಗಳು ಹಾಗೂ ಉದ್ಯಮಶೀಲತಾ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿ ಸಲಿವೆ. ಅಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಹಾಗೂ ಬಿಇಯ ಎಲ್ಲಾ ಗ್ರೇಡ್‍ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. 18ರಿಂದ 35 ವರ್ಷದೊಳಗಿರುವ ಉದ್ಯೋಗಾಕಾಂಕ್ಷಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳು ಇದರ ಸದುಪ ಯೋಗಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ 0821-2489972, 2484477 ಸಂಖ್ಯೆಯನ್ನು ಸಂಪರ್ಕಿಸಬಹುದು.

Translate »